March 14, 2026

Newsnap Kannada

The World at your finger tips!

bommayi

ತರೀಕೆರೆ ಪತ್ರಕರ್ತನ ಕುಟುಂಬಕ್ಕೆ ಪರಿಹಾರ ಬಿಡುಗಡೆ ಮಾಡಿದ ಸಿಎಂ

Spread the love

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಕೋವಿಡ್ ಸಂದರ್ಭದಲ್ಲಿ ಮೃತಪಟ್ಟಿದ್ದ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಈ ಸಂಜೆ ವರದಿಗಾರ ಎಂ.ಜಗದೀಶ್ ಅವರ ಕುಟುಂಬಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2 ಲಕ್ಷ ರೂ ಪರಿಹಾರ ಬಿಡುಗಡೆ ಮಾಡಿದ್ದಾರೆ.

ಪತ್ರಕರ್ತ ಜಗದೀಶ್ ಮೃತಪಟ್ಟಿದ್ದು, ಅವರ ಕುಟುಂಬ ಸಂಕಷ್ಟದಲ್ಲಿರುವ ಬಗ್ಗೆ ಚಿಕ್ಕಮಗಳೂರು ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ರಾಜ್ಯ ಸಂಘದ ಗಮನಕ್ಕೆ ತಂದಿತ್ತು.


ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಮನವಿ ಮೇರೆಗೆ, ಅಂದಿನ ಸಿಎಂ ಯಡಿಯೂರಪ್ಪ ಅವರು ಪರಿಹಾರ ಮಂಜೂರು ಮಾಡಿದ್ದರು.

ಪತ್ರಕರ್ತನ ಕುಟುಂಬಕ್ಕೆ ಪರಿಹಾರ ಮಂಜೂರು ಮಾಡಿದ್ದ ಯಡಿಯೂರಪ್ಪ, ಈಗ ಪರಿಹಾರ ಬಿಡುಗಡೆ ಮಾಡಿದ ಬಸವರಾಜ ಬೊಮ್ಮಾಯಿ ಅವರಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಕೃತಜ್ಞತೆಗಳು.

error: Content is protected !!