ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹುಬ್ಬಳ್ಳಿಯ ಕಾರ್ಯಕ್ರಮದಲ್ಲಿ ISIS ಭಯೋತ್ಪಾದಕ ಸಂಘಟನೆಯ ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.
ಈ ಸಂಬಂಧ ಎಕ್ಸ್‌ನಲ್ಲಿ ಟ್ವಿಟ್ ಮೂಲಕ ಪೋಸ್ಟ್ ಮಾಡಿ ತನ್ವಿರ್ ಪೀರಾ ಎಂಬ ಮುಸ್ಲಿಂ ಮೌಲ್ವಿ ಯೆಮೆನ್, ಸೌದಿ ಹಾಗೂ ಮಧ್ಯ ಪ್ರಾಚ್ಯ ದೇಶಗಳ ಪ್ರವಾಸಗಳ ವೇಳೆ ಭಯೋತ್ಪಾದಕ ಸಂಘಟನೆಗಳ ಪ್ರಮುಖರನ್ನು ಭೇಟಿಯಾಗಿರುವ ಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ.
ಭಯೋತ್ಪಾದಕ ಬೆಂಬಲಿಗೆ ಹಿಂದೆಯೂ ಹಲವಾರು ಬಾರಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದ. ಕೆಲವೇ ದಿನಗಳಲ್ಲಿ ತನ್ವಿರ್ ಪೀರಾ ಎಂಬ ಭಯೋತ್ಪಾದಕ ಬೆಂಬಲಿಗನ ಇನ್ನಷ್ಟು ವಿವರಗಳನ್ನು ಬಹಿರಂಗಗೊಳಿಸುತ್ತೇನೆ.
ಈತನು ಮಧ್ಯಪ್ರಾಚ್ಯ ದೇಶಗಳಿಂದ ಹಣವನ್ನು ಭಾರತಕ್ಕೆ ತರುವ ಹಾಗೂ ಭಾರತದ ಚಟುವಟಿಕಗಳ ಮಾಹಿತಿಯನ್ನು ಅರಬ್ ದೇಶಗಳಿಗೆ ರವಾನಿಸುವ ಕೆಲಸ ಮಾಡುತ್ತಿದ್ದಾನೆ.
ಇಂದು ಬೆಳಗಾವಿಯಲ್ಲಿ ಮುಂಜಾನೆ ನಾನು ಮುಖ್ಯಮಂತ್ರಿಗಳು ISIS ಬೆಂಬಲಿಗನ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಹೇಳಿದ್ದೆ. ರಾಜ್ಯ ಪೊಲೀಸ್, ಕೇಂದ್ರೀಯ ತನಿಖಾ ಸಂಸ್ಥೆಗಳು ಈ ಕುರಿತು ವಿಚಾರಣೆ ಮಾಡಬೇಕು ಎಂದು ಆಗ್ರಹಿಸುತ್ತಿದ್ದೇನೆ ಎಂದಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ