January 1, 2025

Newsnap Kannada

The World at your finger tips!

siddaramiah

ಸಂಸದರ ಅಮಾನತ್ತು ಸಿಎಂ ಸಿದ್ದರಾಮಯ್ಯ ಕಟು ಟೀಕೆ

Spread the love

ಮೈಸೂರು : ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷದವರ ವಾದವನ್ನು ಕೇಳಬೇಕು. ಜನರ ತೀರ್ಪಿನಂತೆ ಸಂಸದರು ಲೋಕಸಭೆ ಅಥವಾ ವಿಧಾನಸಭೆಗೆ ಬಂದಿರುತ್ತಾರೆ. ಅವರ ಹಕ್ಕುಗಳನ್ನು ಕಸಿದುಕೊಳ್ಳಲು ಸಭಾಧ್ಯಕ್ಷರು ಸೇರಿದಂತೆ ಯಾರಿಗೂ ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಶುಕ್ರವಾರ ಹೇಳಿದರು

ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಲೋಕಸಭೆಯ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಸಂಸದರನ್ನು ಅಮಾನತ್ತು ಮಾಡಿರಲಿಲ್ಲ. ಇದು ಪ್ರಜಾಪ್ರಭುತ್ವದ ಕಗ್ಗೊಲೆ. ಕೇಂದ್ರ ಸರ್ಕಾರದವರು ಪ್ರಭಾಪ್ರಭುತ್ವವನ್ನು ಹಾಗೂ ಜನರ ಭಾವನೆಯನ್ನು ಗೌರವಿಸುತ್ತಿಲ್ಲ. ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಜನರು ಸರಿಯಾದ ತೀರ್ಮಾನವನ್ನು ತೆಗೆದುಕೊಳ್ಳುತ್ತಾರೆ ಎಂದರು.

ಇಂಡಿಯಾ ಮೈತ್ರಿಕೂಟ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಪ್ರಧಾನಮಂತ್ರಿ ಅಭ್ಯರ್ಥಿಯಾಗಿ ಪ್ರಸ್ತಾಪವಾಗಿದ್ದು, ಈ ಬಗ್ಗೆ ಇಂಡಿಯಾ ಮೈತ್ರಿಕೂಟದ ಸಭೆಯಲ್ಲೇ ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು

ಮೈಸೂರಿನಲ್ಲಿ 6 ಜನರಿಗೆ ಕೋವಿಡ್ ತಗುಲಿದೆ ಅವರು ಇತರೆ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈಗ ಸದ್ಯದ ಪರಿಸ್ಥಿತಿಯಲ್ಲಿ ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ. ಆದರೆ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳನ್ನು ಜನರು ಕಡ್ಡಾಯವಾಗಿ ಪಾಲಿಸಬೇಕು ಎಂದು ಸಲಹೆ ನೀಡಿದರು.

Copyright © All rights reserved Newsnap | Newsever by AF themes.
error: Content is protected !!