ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ನಾಳೆ ಸಂಜೆ 5ಕ್ಕೆ’ನಗದು ವರ್ಗಾವಣೆ’ಗೆ ‘ಸಿಎಂ ಸಿದ್ಧರಾಮಯ್ಯ’ ಚಾಲನೆ

Team Newsnap
0 Min Read

ನಾಳೆ ಸಂಜೆ 5 ಗಂಟೆಗೆ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಹಣ ವರ್ಗಾವಣೆಗೆ ಸಿಎಂ ಚಾಲನೆ ನೀಡಲಿದ್ದಾರೆ.

ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ಐದು ಕೆಜಿ ಹೆಚ್ಚುವರಿ ಅಕ್ಕಿಯ ಬದಲಾಗಿ ಹಣ ನೀಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದರು.

 ಸಂಜೆ 5 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ನಗದು ನೀಡುವ ಕಾರ್ಯಕ್ರಮಕ್ಕೆ ಚಾಲನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ನೀಡಲಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಿದ ಬಳಿಕ, ಪಡಿತರದಾರರ ಖಾತೆಗೆ ಪ್ರತಿ ಕುಟುಂಬದ ಫಲಾನುಭವಿಗಳ ಖಾತೆಗೆ ರೂ.170 ಹಣ ಡಿಬಿಟಿ ಮೂಲಕ ಜಮಾ ಆಗಲಿದೆ.

Share This Article
Leave a comment