ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಬರ ಪರಿಹಾರ ಬಿಡುಗಡೆ ಕುರಿತು ಮಾತುಕತೆ ನಡೆಸಿದ್ದಾರೆ.
ಕರ್ನಾಟಕ ಸರ್ಕಾರದ ಮನವಿ ಪತ್ರ ನೀಡಿ, ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.
ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
ಇನ್‌ಪುಟ್ ಸಬ್ಸಿಡಿ, 12,7577.86 ಕೋಟಿ ರೂ. ತುರ್ತು ಪರಿಹಾರ, 566.78 ಕೋಟಿ ರೂ. ಕುಡಿಯುವ ನೀರಿಗಾಗಿ ಹಾಗೂ 363.68 ಕೋಟಿ ರೂ. ಜಾನುವಾರುಗಳ ಸಂರಕ್ಷಣೆಗಾಗಿ ಒದಗಿಸುವಂತೆ ಕೋರಲಾಗಿದೆ.
ರಾಜ್ಯದಲ್ಲಿ 236 ರಲ್ಲಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ವಿವರಿಸಿದರು. ಎನ್.ಡಿ.ಆರ್.ಎಫ್. ನಿಂದ 4663.12 ಕೋಟಿ ರೂ. ಇನ್‌ಪುಟ್ ಸಬ್ಸಿಡಿ ಒದಗಿಸುವಂತೆ ಮನವಿ ಮಾಡಲಾಗಿದೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
- ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ