ಬೆಳಗಾವಿ: ಸಿಎಂ ಸಿದ್ದರಾಮಯ್ಯನವರ ಬಗ್ಗೆ ನಾಜಿಯಾ ಖಾನ್ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.
ಬೆಳಗಾವಿ ತಾಲೂಕಿನ ಸುಳೇಬಾವಿ ಗ್ರಾಮದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಾರೆ ಎಂದು ಆರೋಪಿಸಿದ್ದಾರೆ.
ನಾಜಿಯಾ ಖಾನ್ ಹೇಳಿದಂತೆ, ಸಿಎಂ ಕಾಂಗ್ರೆಸ್ ಪಕ್ಷದ ಮಹಿಳಾ ಕಾರ್ಯಕರ್ತರಿಗೆ ಮುತ್ತು ನೀಡುತ್ತಾರೆ. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಅವರು, ಸಿದ್ದರಾಮಯ್ಯ ಚಲನಚಿತ್ರ ನಟಿಯರನ್ನೂ ಕೂಡ ಬಿಡದೆ ಅಪ್ಪಿಕೊಳ್ಳುವ ಬಗ್ಗೆ ಆರೋಪ ಮಾಡಿದ್ದಾರೆ.ಇದನ್ನು ಓದಿ –NMDC ಮತ್ತು ಕುದುರೆಮುಖ ಕಬ್ಬಿಣ ಅದಿರು ಕಂಪನಿಯ ವಿಲೀನ ಪ್ರಕ್ರಿಯೆ ಪ್ರಗತಿ
ಹೀಗೇ ಅವರು ಮಹಿಳಾ ಪತ್ರಕರ್ತೆಯರೊಂದಿಗೆ ಸಹ ಅಸಭ್ಯವಾಗಿ ವರ್ತಿಸಲು ಯತ್ನಿಸಿರುವ ಬಗ್ಗೆ ಆರೋಪಿಸಿದ್ದಾರೆ. “ನನ್ನ ಬಳಿ ಸಿಎಂನವರ ವರ್ತನೆಯಿಂದ ನೊಂದ ಮಹಿಳಾ ಪತ್ರಕರ್ತೆಯರ ಪಟ್ಟಿಯೂ ಇದೆ,” ಎಂದು ನಾಜಿಯಾ ಖಾನ್ ಹೇಳಿದ್ದಾರೆ.
More Stories
ಇಂಡಿಯನ್ ಆಯಿಲ್ ಲಿಮಿಟೆಡ್ನಲ್ಲಿ 456 ಅಪ್ರೆಂಟಿಸ್ ಹುದ್ದೆಗಳ ಭರ್ತಿ – ಅರ್ಜಿ ಆಹ್ವಾನ
ಇಂದಿನಿಂದಲೇ ಬಿಯರ್ ದರ ಹೆಚ್ಚಳ – ಹೊಸ ಬೆಲೆ ವಿವರ !
ಮೈಸೂರಿನಲ್ಲಿ ಹೊಸ ಹೋಟೆಲ್ ಆರಂಭಿಸಲು ತಾಜ್ ಗ್ರೂಪ್ ಸಿದ್ಧ