ಆಗಸ್ಟ್ 3 ರಂದು ಪ್ರಧಾನಿ ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ

Team Newsnap
1 Min Read

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಆ.3 ರಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.

ರಾಜ್ಯದ ಅಭಿವೃದ್ಧಿಯ ಬಗ್ಗೆ ಹಲವು ಚರ್ಚೆ ನಡೆಸ ಬೇಕಿರುವ ಹಿನ್ನೆಲೆಯಲ್ಲಿ ಈ ಭೇಟಿಯನ್ನು ನಿಶ್ಚಯಿಸಲಾಗಿದೆ . ಪ್ರಧಾನ ಮಂತ್ರಿ ಭೇಟಿಗೆ ಸಮಯಾಕಾಶ ನಿಗದಿ ಮಾಡಲಾಗಿದೆ ಎಂದು ಸಿಎಂ ಕಚೇರಿ ಮೂಲಗಳು ಹೇಳಿವೆ.

ಅಂದು ಬೆಳಗ್ಗೆ 11 ಗಂಟೆಗೆ ಸಿದ್ದರಾಮಯ್ಯ ಅವರು ಮೋದಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

ಅದೇ ದಿನ ಮುಖ್ಯಮಂತ್ರಿಯವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವ ರಾಜನಾಥ ಸಿಂಗ್ ಹಾಗೂ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನೂ ಕೂಡ ಭೇಟಿಯಾಗಲಿದ್ದಾರೆ.

Share This Article
Leave a comment