ಬೆಂಗಳೂರಿನ ಇಸ್ರೋ ಕೇಂದ್ರಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ: ವಿಜ್ಞಾನಿಗಳಿಗೆ ಅಭಿನಂದನೆ

Team Newsnap
1 Min Read

ಚಂದ್ರಯಾನ-3 ಸಾಫ್ಟ್ ಲ್ಯಾಂಡಿಂಗ್ ಯಶಸ್ವಿ ಐತಿಹಾಸಿಕ ಸಾಧನೆ ಮಾಡಿದ ISRO ಕೇಂದ್ರಕ್ಕೆ ಸಿಎಂ ಸಿದ್ಧರಾಮಯ್ಯ ಭೇಟಿ ನೀಡಿ ISRO ಕೇಂದ್ರದಲ್ಲಿನ ವಿಜ್ಞಾನಿಗಳಿಗೆ ಅಭಿನಂದಿಸಿದರು.

ನಮಗೆಲ್ಲ ಹೆಮ್ಮೆ ತರುವಂತಹ ವಿಚಾರ ಇದು. ನಾನು ಕೂಡ ನಿನ್ನೆ ವಿಕ್ರಮ್‌ ಲ್ಯಾಂಡರ್‌ ಲ್ಯಾಂಡಿಂಗ್ ವೀಕ್ಷಣೆ ಮಾಡಿದ್ದೇನೆ. ಖುಷಿ ಆಯ್ತು, ಬಹಳ ಹೆಮ್ಮೆ ಎನಿಸಿತು. ಇದೊಂದು ದೊಡ್ಡ ಸಾಧನೆ. ಹಲವು ವರ್ಷಗಳಿಂದ ವಿಜ್ಞಾನಿಗಳು ಶ್ರಮ ಪಟ್ಟಿದ್ದಾರೆ. ನೂರಾರು ವಿಜ್ಞಾನಿಗಳ ಪರಿಶ್ರಮದ ಫಲ ಇದು ಎಂದು ಶ್ಲಾಘಿಸಿದರು.

isro cm1

ಸಿಎಂ ಸಿದ್ಧರಾಮಯ್ಯ ಜೊತೆಗೆ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎಸ್ ಬೋಸರಾಜು ಸಾಥ್ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಇಸ್ರೋ ಅಧ್ಯಕ್ಷರು ಹಾಗೂ ವಿಜ್ಞಾನಿಗಳನ್ನು ಸರ್ಕಾರದ ವತಿಯಿಂದ ಗೌರವಿಸಲಾಗುತ್ತದೆ. ಸರ್ಕಾರದ ವತಿಯಿಂದ ವಿಧಾನಸೌಧದ ಬಾಂಕ್ವೆಟ್ ಹಾಲ್‌ನಲ್ಲಿ ಕಾರ್ಯಕ್ರಮ ಆಯೋಜಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.

Share This Article
Leave a comment