ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಸನದ ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿ, ಹಾಸನಾಂಬೆ ದೇವಿಯ ದರ್ಶನ ಪಡೆದರು.
ಹಾಸನಾಂಬೆ ದರ್ಶನ ಪಡೆದು ಹೊರ ಬಂದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮುಂಗಾರು ಕೈಕೊಟ್ಟಿದೆ, ಹಿಂಗಾರಾದ್ರೂ ಬರಲಿ ಎಂದು ತಾಯಿ ಹಾಸನಾಂಬೆ ದೇವಿಯಲ್ಲಿ ಬೇಡಿಕೊಂಡಿದ್ದಾರೆ .
ಮುಂಗಾರು ಮಳೆ ರಾಜ್ಯದಲ್ಲಿ ಕೈಕೊಟ್ಟಿದೆ. ಈ ಕಾರಣದಿಂದಾಗಿ ಬರಗಾಲ ಆವರಿಸಿದೆ. ಕನಿಷ್ಠ ಪಕ್ಷ ಹಿಂಗಾರಾದ್ರೂ ಬರಲಿ ಎಂಬುದಾಗಿ ಹಾಸನಾಂಬೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಕೋರಿಕೊಂಡಿದ್ದಾರೆ.
ಈ ವೇಳೆ ಸಿಎಂ ಸಿದ್ಧರಾಮಯ್ಯ ಅವರಿಗೆ ಸಚಿವ ಕೆ ಎನ್ ರಾಜಣ್ಣ, ಶಾಸಕ ಶಿವಲಿಂಗೇಗೌಡ ಸಾಥ್ ನೀಡಿದರು.
ಮುಂಗಾರು ಮಳೆ ಕೊರತೆಯಾಗಿ, ಹಿಂಗಾರು ಮಳೆ ಬಂದರೆ ದರ ಕರುಗಳಿಗೆ ಮೇವು ಆಗಲಿದೆ. ಈ ಕಾರಣದಿಂದಾಗಿ ರಾಜ್ಯದಲ್ಲಿ ಹಿಂಗಾರು ಮಳೆ ಬರುವಂತೆ ಮಾಡು ಹಾಸನಾಂಬೆ ತಾಯಿ ಎಂದು ಕೋರಿಕೊಂಡಿದ್ದಾಗಿ ತಿಳಿಸಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು