ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ : ಅಧಿಕಾರಿಗಳ ಸಭೆ

Team Newsnap
1 Min Read

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಳೆ (ಜೂನ್ 10 ರಂದು ) ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ನಾಳೆ ಮಧ್ಯಾಹ್ನ 12.20 ಕ್ಕೆ ಸುತ್ತೂರಿನ ಜೆಎಸ್ಎಸ್ ವಸತಿ ಶಾಲಾ ಮೈದಾನದ ಹೆಲಿಪ್ಯಾಡ್ ತಲುಪುವರು. 12:35ಕ್ಕೆ ಬಿಳಿಗೆರೆ ಗ್ರಾಮದಲ್ಲಿ ಹಮ್ಮಿಕೊಂಡಿರುವ ಕೃತಜ್ಞತಾ ಸಮಾರಂಭದಲ್ಲಿ ಪಾಲ್ಗೊಳ್ಳುವರು.

ಮಧ್ಯಾಹ್ನ 2:45 ಕ್ಕೆ ಸುತ್ತೂರು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.

ಸಂಜೆ 4 ಗಂಟೆಗೆ ಮೈಸೂರಿನ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.ರಾಜ್ಯದ 31 ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ

ಜೂನ್ 11ರಂದು ಬೆಳಗ್ಗೆ 9:30ಕ್ಕೆ ಮೈಸೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

Share This Article
Leave a comment