ಸಿಎಂ ಸಿದ್ದು ಪತ್ನಿ ಪಾರ್ವತಿಗೆ ತೀವ್ರ ಜ್ವರ : ಮಣಿಪಾಲ್ ಗೆ ದಾಖಲು

Newsnap Team
1 Min Read
CM Siddu's wife Parvati has high fever: admitted to Manipal ಸಿಎಂ ಸಿದ್ದು ಪತ್ನಿ ಪಾರ್ವತಿಗೆ ತೀವ್ರ ಜ್ವರ : ಮಣಿಪಾಲ್ ಗೆ ದಾಖಲು

ಬೆಂಗಳೂರು: ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ತೀವ್ರ ಜ್ವರದ ಹಿನ್ನೆಲೆಯಲ್ಲಿ ನಿನ್ನೆ(ಜೂನ್ 20) ರಾತ್ರಿ 11.30ಗೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಕಾರಣದಿಂದಾಗಿ ಸಿಎಂ ಸಿದ್ದರಾಮಯ್ಯನವರ ನವದೆಹಲಿ ಪ್ರವಾಸದ ಸಮಯ ಬದಲಾವಣೆಯಾಗಿದೆ.

ಸಿದ್ದರಾಮಯ್ಯ ಇಂದು(ಜೂನ್ 21) ಬೆಳಗ್ಗೆ 9.50ಕ್ಕೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಬೇಕಿತ್ತು. ಆದರೆ, ಪತ್ನಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಲಿದ್ದಾರೆ. ಹೀಗಾಗಿ ಬೆಳಗ್ಗೆ 11.30 ಗೆ ಹೆಚ್​ಎಎಲ್ ನಿಲ್ದಾಣದಿಂದ ವಿಶೇಷ ವಿಮಾನ ಮೂಲಕ ದೆಹಲಿಗೆ ತೆರಳಲಿದ್ದಾರೆ.

ದೆಹಲಿ ಭೇಟಿ ಉದ್ದೇಶವೇನು? :

ಇಂದು ದೆಹಲಿಗೆ ಭೇಟಿ ನೀಡುವ ಸಿಎಂ ಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕರ್ನಾಟಕ ಸರ್ಕಾರದ ಸಚಿವರ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಸಿದ್ದರಾಮಯ್ಯ ಅವರು ಪಾಲ್ಗೊಳ್ಳಲಿದ್ದಾರೆ.

ಸಭೆಗೂ ಮುನ್ನ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ವಿವಿಧ ಕೇಂದ್ರ ನಾಯಕರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.ಮತ್ತೆ 15 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಅಲ್ಲದೇ ಸಂಜೆ ರಾಷ್ಟ್ರಪತಿ ಅವರನ್ನು ಭೇಟಿ ಮಾಡಲಿದ್ದಾರೆ.

Share This Article
Leave a comment