ಜೂನ್ 11ರಂದು ಬಸ್ ಕಂಡಕ್ಟರ್ ಆಗಲಿರುವ ಸಿಎಂ ಸಿದ್ದು –

Team Newsnap
1 Min Read

ರಾಜ್ಯದ ಕಾಂಗ್ರೆಸ್ ನೀಡಿರುವ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ‘ಶಕ್ತಿ ‘ಯನ್ನು ಭಾನುವಾರದಂದು ವಿಭಿನ್ನವಾಗಿ ಚಾಲನೆ ನೀಡಲು ಸಿಎಂ ಸಿದ್ದರಾಮಯ್ಯ ಸ್ವತಃ ಬಸ್‌ನ ಕಂಡಕ್ಟರ್ ಆಗಲಿದ್ದಾರೆ.

ಜೂನ್ 11 ರಂದು ಶಕ್ತಿ ಯೋಜನೆಗೆ ಸಿದ್ದರಾಮಯ್ಯ ತಾವೇ ಬಸ್ ಕಂಡಕ್ಟರ್ ಆಗಿ ಮಹಿಳೆಯರಿಗೆ ಬಿಎಂಟಿಸಿ ಬಸ್‌ನಲ್ಲಿ ಉಚಿತ ಟಿಕೆಟ್ ವಿತರಿಸಿ ಶಕ್ತಿ ಯೋಜನೆಗೆ ಸಿಎಂ ಚಾಲನೆ ನೀಡಲಿದ್ದಾರೆ.

ಮೆಜೆಸ್ಟಿಕ್‌ನಿಂದ ವಿಧಾನಸೌಧ ಮಾರ್ಗದ ಬಿಎಂಟಿಸಿ ಬಸ್‌ನಲ್ಲೇ ಸಿದ್ದರಾಮಯ್ಯ ಕಂಡಕ್ಟರ್ ಆಗಲಿದ್ದಾರೆ.

ರೂಟ್ ನಂ.43 ಬಸ್‌ನಲ್ಲಿ ಕಂಡಕ್ಟರ್ ರೀತಿ ಮಹಿಳೆಯರಿಗೆ ಉಚಿತ ಟಿಕೆಟ್ ವಿತರಿಸಲಿದ್ದಾರೆ. ನಂತರ ವಿಧಾನಸೌಧದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಶಕ್ತಿ ಯೋಜನೆಗೆ ಸಿಎಂ ಚಾಲನೆ ನೀಡಲಿದ್ದಾರೆ.ಗುಡುಗಿದ ಸಿಎಂ – ಡಿಸಿ ಕಚೇರಿ ಸ್ಥಳಾಂತರ

ಅಂದೇ ಆಯಾ ಜಿಲ್ಲೆಗಳಲ್ಲಿ ಸಚಿವರಿಂದ ಏಕಕಾಲದಲ್ಲಿ ಯೋಜನೆಗೆ ಚಾಲನೆ ಸಿಗಲಿದೆ.

Share This Article
Leave a comment