December 22, 2024

Newsnap Kannada

The World at your finger tips!

ram mandir , ramnagar , foundation

CM to lay foundation on 19th march for the construction of Ram mandir in Ramnagar ರಾಮನಗರದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಮಾ. 19 ರಂದು ಸಿಎಂ ಶಂಕುಸ್ಥಾಪನೆ

ಸಿಎಂ ಬೊಮ್ಮಾಯಿಗೆ ಕೊರೊನಾ – ದೆಹಲಿ ಪ್ರವಾಸ ರದ್ದು

Spread the love

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.

ಈ ಕುರಿತಂತೆ ಸಿಎಂ ಅವರೇ ಟ್ವೀಟ್​ ಮಾಡಿ ಮಾಹಿತಿ ನೀಡಿದ್ದಾರೆ. ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದೆ, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ ಎಂದು ಟ್ವಿಟರ್​​ನಲ್ಲಿ ಬರೆದುಕೊಂಡಿದ್ದಾರೆ.ಇದನ್ನು ಓದಿ –ರಾಜ್ಯದಲ್ಲಿ 108 ಇನ್ಸ್ ಪೆಕ್ಟರ್ ಗಳ ವರ್ಗಾವಣೆ : ವಿವರ ಇಲ್ಲಿದೆ

ಇಂದು ದೆಹಲಿಯಲ್ಲಿ 75ನೇ ಸ್ವಾತಂತ್ರ್ಯೋತ್ಸದ ಅಮೃತ ಮಹೋತ್ಸವ ಕುರಿತು ಸಭೆಯಿತ್ತು. ಈ ಸಭೆಗೆ ಮುಖ್ಯಮಂತ್ರಿಗಳು ಹಾಜರಾಗಬೇಕಿತ್ತು. ಜೊತೆಗೆ ಯೋಜನೆ ಆಯೋಗದ ಕಾರ್ಯಕ್ರಮದಲ್ಲಿಯೂ ಬೊಮ್ಮಾಯಿ ಭಾಗವಹಿಸಬೇಕಿತ್ತು.

ಆದರೆ ಹಠಾತ್ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ದೆಹಲಿ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!