ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಹಗರಣ ಸಂಬಂಧಿಸಿರುವ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಹುಬ್ಬಳ್ಳಿಯಲ್ಲಿ ಮಾತನಾಡುತ್ತ, ನ.6ರಂದು ಬೆಳಿಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.
ಮುಡಾ ಹಗರಣದ ಪ್ರಕರಣದಲ್ಲಿ ಎ1 ಆರೋಪಿ ಎಂಬ ಸ್ಥಿತಿಯಲ್ಲಿ ಮೈಸೂರು ಲೋಕಾಯುಕ್ತ ಕಚೇರಿಯವರು ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದು, ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಇದು ಸಿದ್ದರಾಮಯ್ಯ ಅವರ 40 ವರ್ಷಗಳ ರಾಜಕೀಯ ಬದುಕಿನಲ್ಲಿ ಮೊದಲ ಬಾರಿಗೆ ವಿಚಾರಣೆಗೆ ನೋಟಿಸ್ ನೀಡಿರುವ ಮಹತ್ವದ ಘಟನೆ.ಇದನ್ನು ಓದಿ -HDK – ನಿಖಿಲ್ ವಿರುದ್ಧ ಎಡಿಜಿಪಿ ಚಂದ್ರಶೇಖರ್ ದೂರು ದಾಖಲು
ಇದರಿಂದ ನಾಳೆ ಬೆಳಿಗ್ಗೆ 10 ಗಂಟೆಗೆ ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗುವುದಾಗಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )