ನಾಳೆ ಗೃಹಲಕ್ಷ್ಮಿ ಯೋಜನೆಗೆ ಸಿಎಂ ಚಾಲನೆ : ಲಕ್ಷ್ಮಿ ಹೆಬ್ಬಾಳ್ಕರ್

Team Newsnap
1 Min Read

ಗೃಹಲಕ್ಷ್ಮಿ ಯೋಜನೆಗೆ ನಾಳೆ ಚಾಲನೆ ನೀಡಲಾಗುವುದು, ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ನಾಳೆಯಿಂದ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ಗೃಹಲಕ್ಷ್ಮಿ ಯೋಜನೆ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್, ನಾಳೆ 1:30 ಕ್ಕೆ ಶಕ್ತಿ ಭವನದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಸಿಎಂ ಚಾಲನೆ ನೀಡಲಿದ್ದಾರೆ. ಯೋಜನೆಯ ವೆಬ್‌ಸೈಟ್ ಲಾಂಚ್ ಮಾಡಲಾಗುವುದು. ಸಾಂಕೇತಿಕವಾಗಿ ನಾಲ್ಕೈದು ಜನರಿಗೆ ನಾಳೆ ನೋಂದಣಿ ಮಾಡಲಿದ್ದೇವೆ. ಆಗಸ್ಟ್ 18 ಕ್ಕೆ ಬೆಳಗಾವಿಯಿಂದ ಚಾಲನೆ ನೀಡಲಾಗುವುದು ಎಂದು ಹೇಳಿದರು.

ಅರ್ಜಿ ಸಲ್ಲಿಸಲು ಮನೆ ಯಜಮಾನಿಯ ಪತಿಯ ಆಧಾರ್ ಕಾರ್ಡ್ ಸಂಖ್ಯೆ, ಮೊಬೈಲ್ ಸಂಖ್ಯೆ, ಅರ್ಜಿದಾರರ ಬ್ಯಾಂಕ್ ಖಾತೆ ವಿವರ ಸಲ್ಲಿಸೋದು ಕಡ್ಡಾಯವಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇಲ್ಲ ಎಂದು ಸ್ಪಷ್ಟಪಡಿಸಿದರು.

ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪ್ರಮುಖ ಅಂಶಗಳು:

*ಅರ್ಜಿದಾರರು 16-06-2023 ರಿಂದ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

*ಅರ್ಜಿಗಳನ್ನು ಆನ್‌ಲೈನ್ ಮೂಲಕ ಅಥವಾ ಭೌತಿಕವಾಗಿ ಗ್ರಾಮ ಒನ್/ಬೆಂಗಳೂರು ಒನ್/ಕರ್ನಾಟಕ ಒನ್‌ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಸಲ್ಲಿಸಬಹುದಾಗಿದೆ.

(https://sevasindhugs.karnataka.gov.in/gruhalakshmi)

  • ಅರ್ಜಿ ಸಲ್ಲಿಕೆಗೆ SMS ಮೂಲಕ ಹಾಗೂ ಸೇವಾಸಿಂಧು ಪೋರ್ಟಲ್ ಮೂಲಕ Auto generated ಸ್ವೀಕೃತಿಗಳನ್ನು ಪಡೆಯಬಹುದಾಗಿದೆ
  • ಅರ್ಜಿ ಸಲ್ಲಿಸಲು ಅರ್ಜಿದಾರರ ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ ಮೊಬೈಲ್ ಸಂಖ್ಯೆ ಹಾಗೂ ಅರ್ಜಿದಾರರ ಬ್ಯಾಂಕ್‌ ಖಾತೆ ವಿವರಗಳು ಅಗತ್ಯವಾಗಿರುತ್ತದೆ.
  • ಮಂಜೂರಾತಿಯ ನಂತರ DBT ಮೂಲಕ ನೇರ ನಗದು ವರ್ಗಾವಣೆ ಮಾಡಲಾಗುವುದು.
  • ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ, ಸಂಪೂರ್ಣ ಉಚಿತವಾಗಿರುತ್ತದೆ.
  • ಅರ್ಜಿದಾರರು ಮಧ್ಯವರ್ತಿಗಳ ಮೇಲೆ ಅವಲಂಬಿತರಾಗದೆ ಅರ್ಜಿಯನ್ನು ಸ್ವತಃ ಮೇಲೆ ತಿಳಿಸಿದ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿರುತ್ತದೆ.
  • ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ.

ಇದನ್ನು ಓದಿ – ಬೆಂಗಳೂರು ಮತ್ತು ಹಳೆ ಮೈಸೂರು ಭಾಗದಲ್ಲಿ ಜೂನ್ 18 ರಿಂದ 22 ರವರೆಗೆ ಭಾರಿ ಮಳೆಯ ಸಾಧ್ಯತೆ

ಯೋಜನೆಯ ಕುರಿತಂತೆ ಸಂದೇಹ/ ಕುಂದುಕೊರತೆಗಳಿದ್ದಲ್ಲಿ ಸಹಾಯವಾಣಿ (Helpline) – 1902 ಗೆ ಸಂಪರ್ಕಿಸಬಹುದಾಗಿದೆ.

Share This Article
Leave a comment