ಈ ಬಾರಿ ಚುನಾವಣೆಯಲ್ಲಿ ಮತದಾರರ ಮತಗಳನ್ನು ಸೆಳೆಯುವ ನಿಟ್ಟಿನಲ್ಲಿ ಬಜೆಟ್ ನಲ್ಲಿ ಕೆಲವು ಮಹತ್ವದ ಘೋಷಣೆಗಳನ್ನು ಸರ್ಕಾರ ಮಾಡಿತ್ತು.
ಹಳೆ ಮೈಸೂರು ಭಾಗದ ಮೇಲೆ ಕಣ್ಣಿಟಿರುವ ಬಿಜೆಪಿ ಸರ್ಕಾರ ರಾಮನಗರದ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಮಾಡಲು ತೀರ್ಮಾನಿಸಿದೆ.
ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರದ ಮಾದರಿಯಲ್ಲೇ ಕರ್ನಾಟಕದಲ್ಲೂ ಮಂದಿರ ನಿರ್ಮಿಸಲು ಸರ್ಕಾರ ನಿರ್ಧರಿಸಿದೆ.
ರಾಮನಗರದ ರಾಮದೇವರ ಬೆಟ್ಟವನ್ನು ದಕ್ಷಿಣ ಭಾರತದ ಅಯೋಧ್ಯೆಯಾಗಿ ಅಭಿವೃದ್ಧಿಪಡಿಸಿ ಅದನ್ನು ಪಾರಂಪರಿಕ ಪ್ರವಾಸಿ ಕ್ಷೇತ್ರವಾಗಿ ಮಾಡಬೇಕು. ರಾಮದೇವರ ಬೆಟ್ಟದಲ್ಲಿ ಮುಜರಾಯಿ ಇಲಾಖೆಗೆ ಸೇರಿರುವ 19 ಎಕರೆ ಪ್ರದೇಶದಲ್ಲಿ ರಾಮ ಮಂದಿರ ನಿರ್ಮಿಸಬೇಕೆಂದು ಎಂದು ಸಚಿವ ಅಶ್ವತ್ಥ ನಾರಾಯಣ ಒತ್ತಾಯಿಸಿದ್ದರು.ಇದನ್ನು ಓದಿ –ಪ್ರತಿಭಟನೆಗೆ ಇಳಿದ ಮಾಜಿ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಪೋಲಿಸರ ವಶಕ್ಕೆ
More Stories
ಮನ್ಮುಲ್ ಫಲಿತಾಂಶ: ಕಾಂಗ್ರೆಸ್ ಅಧಿಕಾರಕ್ಕೆ ; 3 ತಾಲೂಕುಗಳ ಫಲಿತಾಂಶಕ್ಕೆ ತಡೆ
ಮಂಡ್ಯ: ಬಾಲಕಿಗೆ ಕೇಕ್ ನೀಡಿದ ಕಾಮುಕರು ಚಾಕು ಬೆದರಿಕೆ ಹಾಕಿ ಗ್ಯಾಂಗ್ ರೇಪ್
ಕೆರೆಗೆ ಈಜಲು ತೆರಳಿದ ಇಬ್ಬರು ಬಾಲಕರು ನೀರುಪಾಲು