ಅಗತ್ಯ ಬಿದ್ದರೆ ಯುಪಿ ಮಾಡೆಲ್‌ ಜಾರಿಗೊಳಿಸಲೂ ಹಿಂದೇಟು ಹಾಕುವುದಿಲ್ಲ – ಸಿಎಂ ಖಡಕ್‌ ಎಚ್ಚರಿಕೆ

Team Newsnap
1 Min Read

ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಅವರನ್ನು ಮಂಗಳವಾರದಂದು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಹತ್ಯೆ ಬಳಿಕ ಹಿಂದೂ ಕಾರ್ಯಕರ್ತರು ತೀವ್ರ ಆಕ್ರೋಶಗೊಂಡಿದ್ದು, ರಾಜ್ಯ ಬಿಜೆಪಿ ಸರ್ಕಾರದ ವಿರುದ್ದ ಕಿಡಿ ಕಾರಿದ್ದಾರೆ.

ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸರ್ಕಾರ ಇಂತಹ ಕೃತ್ಯಗಳಲ್ಲಿ ಪಾಲ್ಗೊಂಡವರ ಮನೆ ಮೇಲೆ ಬುಲ್ಡೋಜರ್‌ ಹತ್ತಿಸಿ ಧ್ವಂಸ ಮಾಡುತ್ತಿದ್ದು, ಇದರಿಂದಾಗಿ ಅಲ್ಲಿ ಕ್ರಿಮಿನಲ್‌ ಪ್ರಕರಣಗಳು ಕಡಿಮೆಯಾಗಿದೆ. ಹೀಗಾಗಿ ಕರ್ನಾಟಕದಲ್ಲೂ ಇಂತಹುದೇ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದರು.

ಪ್ರಧಾನಿ ಮೋದಿ vs 5 ವರ್ಷದ ಪುಟಾಣಿ ನಡುವೆ ನಡೆದ ಸಂಭಾಷಣೆ ಹೇಗಿತ್ತು ನೋಡಿ!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೂ ಈ ಕುರಿತು ಪರೋಕ್ಷ ಸುಳಿವು ನೀಡಿದ್ದು, ಹತ್ಯೆಯಂತಹ ಕ್ರಿಮಿನಲ್‌ ಕೃತ್ಯಗಳಲ್ಲಿ ಪಾಲ್ಗೊಂಡವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ. ನಮ್ಮ ಮುಂದೆ ಎಲ್ಲಾ ಆಯ್ಕೆಗಳಿದ್ದು, ಅಗತ್ಯ ಬಿದ್ದರೆ ಯುಪಿ ಮಾಡೆಲ್‌ ಜಾರಿಗೊಳಿಸಲೂ ಹಿಂದೇಟು ಹಾಕುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

Share This Article
Leave a comment