ಸಚಿವ ಡಾ ಸುಧಾಕರ್ ರಿಂದ ಕೊವಿಡ್ ನಿರ್ವಹಣೆಯ ಎಲ್ಲಾ ಜವಾಬ್ದಾರಿ ಕಿತ್ತುಕೊಂಡ ಸಿಎಂ‌‌

Team Newsnap
1 Min Read

ಚಾಮರಾಜನಗರದಲ್ಲಿ ನಡೆದ ಆಕ್ಸಿಜನ್ ದುರಂತ ಪ್ರಕರಣದ ನಂತರ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ನೀಡಿದ್ದ ಎಲ್ಲಾ ಜವಾಬ್ದಾರಿಯನ್ನು ಸಿಎಂ ಯಡಿಯೂರಪ್ಪ ಕಿತ್ತುಕೊಂಡಿದ್ದಾರೆ.‌

ಸಚಿವ ಡಾ. ಸುಧಾಕರ್ ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಆಗ್ರಹಿಸಿ, ಚಾಮರಾಜನಗರ ದುರಂತಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಈ ಹಿನ್ನೆಲೆಯಲ್ಲಿ ಸಿಎಂ ಬಿ ಎಸ್ ಯಡಿಯೂರಪ್ಪ , ಆರೋಗ್ಯ ಸಚಿವ ಡಾ, ಸುಧಾಕರ್ ಗೆ ಆರೋಗ್ಯ ಖಾತೆಯೊಂದನ್ನು ಬಿಟ್ಟು, ಕೊರೊನಾ ನಿಯಂತ್ರಣ ಸಂಬಂಧ ನೀಡಿದ್ದ ಎಲ್ಲಾ ಜವಾಬ್ದಾರಿಯನ್ನು ಸಿಎಂ ವಾಪಸ್ ತೆಗೆದುಕೊಂಡಿದ್ದಾರೆ.

ಯಾವ ಸಚಿವರಿಗೆ ಯಾವ ಜವಾಬ್ದಾರಿ :

  • ಡಿಸಿಎಂ ಅಶ್ವಥ್ ನಾರಾಯಣ್ ಗೆ ಔಷಧ ಕೊರತೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ
  • ಸಚಿವ ಜಗದೀಶ್ ಶೆಟ್ಟರ್ ಆಕ್ಸಿಜನ್ ಸರಬರಾಜು ನಿರ್ವಹಣೆ ಬಗ್ಗೆ, ಕೇಂದ್ರ ಸರ್ಕಾರದಿಂದ ಸಂಪರ್ಕ ಸಾಧಿಸಿ, ಅಗತ್ಯ ಆಕ್ಸಿಜನ್ ತರೆಸಿಕೊಡುವಂತ ಕೆಲಸ ಮಾಡುತ್ತಾರೆ.
  • ಅಗತ್ಯ ಔಷಧಿ, ರೆಮಿಡಿಸಿವಿರ್ ನಿರ್ವಹಣೆಯ ಜವಾಬ್ದಾರಿಯನ್ನು ಉಪ ಮುಖ್ಯಮಂತ್ರಿ ಡಾ.ಸಿಎನ್ ಅಶ್ವತ್ಥ್ ನಾರಾಯಣ್ ಅವರಿಗೆ ವಹಿಸಲಾಗಿದೆ.
  • ಔಷಧಿಯ ಕೊರತೆ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳನ್ನು ಕೋವಿಡ್ ಕೆಲಸಕ್ಕೆ ಬಳಸಿಕೊಳ್ಳುವ ಕೆಲಸ ಮಾಡಲಿದ್ದಾರೆ.
  • ಬಸವರಾಜ ಬೊಮ್ಮಾಯಿ ಹಾಗೂ ಆರ್ ಅಶೋಕ್ ಅವರಿಗೆ ಅಗತ್ಯ ಬೆಡ್ ವ್ಯವಸ್ಥೆ ಹೊಣೆ.
  • ಅರವಿಂದ್ ಲಿಂಬಾವಳಿಯವರು ವಾರ್ ರೂಂ ಹಾಗೂ ಕಾಲ್ ಸೆಂಟರ್ ನಿರ್ವಹಣೆ.‌
Share This Article
Leave a comment