ನೆರೆ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿರುವ ಸಿಎಂ

Team Newsnap
1 Min Read
Prime Minister Modi to inaugurate Shimoga Airport: BSYಶಿವಮೊಗ್ಗದ ವಿಮಾನ ನಿಲ್ದಾಣ ಉದ್ಘಾಟಿಸಲಿರುವ ಪ್ರಧಾನಿ ಮೋದಿ : ಬಿಎಸ್‍ವೈ

ವಾಯುಭಾರ ಕುಸಿತದ ಕಾರಣದಿಂದಾಗಿ ನೆರೆ ಸಂಕಷ್ಟ ಅನುಭವಿಸುತ್ತಿರುವ ಉತ್ತರ ಕರ್ನಾಟಕ ಭಾಗದ ಕಲಬುರ್ಗಿ, ಯಾದಗಿರಿ, ಬಿಜಾಪುರ ಮತ್ತು ರಾಯಚೂರು ಜಿಲ್ಲೆಗಳನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಕ್ಟೋಬರ್ 21 ರಂದು ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಿಎಂ, ‘ವಾಯುಭಾರ ಕುಸಿತದ ಕಾರಣದಿಂದ ಯಾದಗಿರಿ, ಕಲಬುರ್ಗಿ, ರಾಯಚೂರು, ವಿಜಾಪುರ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಿದ್ದು, ನೆರೆ ಹಾವಳಿ ಸಂಭವಿಸಿದೆ. ಅನೇಕ ಕುಟುಂಬಗಳು ನಿರಾಶ್ರಿತವಾಗಿವೆ. ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಹಾನಿ‌ ಸಂಭವಿಸಿದೆ. ಹಾಗಾಗಿ ನೆರೆ ಪೀಡಿತ ಪ್ರದೇಶಗಳ ಅವಲೋಕನಕ್ಕಾಗಿ ಅಕ್ಟೋಬರ್ 21 ರಂದು ವೈಮಾನಿಕ ಸಮೀಕ್ಷೆ ನಡೆಸಲಿದ್ದೇನೆ’ ಎಂದಿದ್ದಾರೆ.

ಸ್ಥಳೀಯ ಆಡಳಿತಗಳು ನೆರೆ ಪೀಡಿತ ಪ್ರದೇಶಗಳಲ್ಲಿ‌ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸುತ್ತಾ ‘ಜಿಲ್ಲಾಡಳಿತಗಳು ಪರಿಹಾರ ಕಾರ್ಯಾಚರಣೆಯನ್ನು ಸೂಕ್ತವಾಗಿ ನಿರ್ವಹಿಸುತ್ತಿವೆ. ಪರಿಸ್ಥಿತಿಯ ಅರಿವಿಗೋಸ್ಕರ ನಾನು ವೈಮಾನಿಕ ಸಮಿಕ್ಷೆ ಕೈಗೊಳ್ಳುತ್ತಿದ್ದೇನೆ’ ಎಂದು ಅವರು ಹೇಳಿದರು.

TAGGED:
Share This Article
Leave a comment