February 25, 2026

Newsnap Kannada

The World at your finger tips!

YADIYURAPPA1

ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ ಭಾಗಿ‌

Spread the love

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಜು.1 ರಂದು ಆಯೋಜಿಸಿರುವ ಜೂಮ್ ಮೀಟ್ ಪತ್ರಿಕಾ ದಿನಾಚರಣೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪಾಲ್ಗೊಳ್ಳಲಿದ್ದಾರೆ.

1843 ಜು.1 ರಂದು ಪ್ರಕಟವಾದ ಮಂಗಳೂರು ಸಮಾಚಾರ ಕನ್ನಡ ಪತ್ರಿಕೋದ್ಯಮದ ಪ್ರಪ್ರಥಮ ಪತ್ರಿಕೆ.

ಇದೇ ದಿನವನ್ನು ಪತ್ರಿಕಾ ದಿನಾಚರಣೆಯಾಗಿ ವಾರ್ತಾ ಇಲಾಖೆ ಸಹಯೋಗದಿಂದ ಆಚರಣೆ ಮಾಡಿಕೊಂಡು ಬರುತ್ತಿರುವ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ, ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲು ನಿರ್ಧರಿಸಿದೆ.

.2021ರ ಜುಲೈ1_ರಂದು (ಗುರುವಾರ) ಮಧ್ಯಾಹ್ನ 12.30ಕ್ಕೆ
ಜೂಮ್ ಮೀಟ್ ಮೂಲಕ ಪತ್ರಕರ್ತರನ್ನು ಉದ್ದೇಶಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತನಾಡಲಿದ್ದಾರೆ.

error: Content is protected !!