ಸಂಪುಟ ವಿಸ್ತರಣೆ ಹಾಗೂ ಪುನರ್ ರಚನೆ ವಿಚಾರ ಸಂಬಂಧ ಸಿಎಂ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿರುವ ಸಂಸದ ಶ್ರೀನಿವಾಸ್ ಪ್ರಸಾದ್, ಯಡಿಯೂರಪ್ಪ ಸಿಎಂ ಆಗುವಾಗ ನನ್ನ ಪಾತ್ರ ಇತ್ತು. ಈಗ ಸಿಎಂ ಆದ್ರಲ್ಲ ಇನ್ನೇನು ಆ ದರ್ದು ಅವರಿಗೆ ಇಲ್ಲ. ಈಗ ಆರಾಮವಾಗಿ ಇದ್ದಾರೆ. ಮುಂದೆ ನಾನು ನೋಡ್ಕೋತಿವಿ ಬಿಡಿ ಎಂದು ಹೇಳಿದ್ದಾರೆ.
ಸುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಇದೇ ವೇಳೆ ಹಳೆ ಮೈಸೂರು ಭಾಗಕ್ಕೆ ರಾಜ್ಯ ಸರ್ಕಾರದ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಮಂತ್ರಿ ಪಟ್ಟವನ್ನು ನಾನೇ ಬೇಡ ಎಂದಿದ್ದೇನೆ. ಚುನಾವಣೆಯನ್ನೆ ಬೇಡ ಎಂದಿದ್ದವನು ನಾನು. ಇನ್ನು ಮಂತ್ರಿ ಪಟ್ಟ ಯಾಕೇ ಬೇಕು ನನಗೆ. ನಾನು ಕೇಂದ್ರದಲ್ಲಿ ಸಚಿವಸ್ಥಾನದ ಆಕಾಂಕ್ಷಿಯಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಖಾಸಗಿ ಶಾಲೆಗಳು ನಮ್ಮ ಕೈಯಲ್ಲಿ ಇದೆ. ನಾವು ಶಾಲೆಗಳ ಕೈಯಲ್ಲಿ ಇಲ್ಲ. ಆನ್ ಲೈನ್ ಕ್ಲಾಸ್ ಗೆ ಫೀಸ್ ಕಟ್ಟಿಲ್ಲ ಅಂದ್ರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ. ಅದಕ್ಕೆ ಅವರು ಹಂಗ್ ಮಾಡಿದ್ರು, ಹಿಂಗ್ ಮಾಡಿದ್ರು ಅಂತ ಕಿರುಚಾಡೋದು ಬೇಡ. ಸರ್ಕಾರ ಇಂತಹ ವಿಚಾರದಲ್ಲಿ ಗಂಭೀರವಾಗಿರಬೇಕು ಎಂದು ಸಲಹೆ ನೀಡಿದ್ದಾರೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು