February 23, 2026

Newsnap Kannada

The World at your finger tips!

shivananda thagaduru

ದಕ ಜಿಲ್ಲೆ, ಕುಡುಪು ಪತ್ರಕರ್ತನ ಕುಟುಂಬಕ್ಕೆ ಸಿಎಂ ನೆರವು

Spread the love

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (KUWJ)ಮನವಿ ಮೇರೆಗೆ ಇತ್ತೀಚೆಗೆ ಮೃತಪಟ್ಟಿದ್ದ ವಿಜಯ ಕರ್ನಾಟಕ, ಹೊಸ ದಿಗಂತ,
ವಾರ್ತಾ ಭಾರತಿ,
ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡಿದ್ದ ದಯಾನಂದ ಕುಡುಪು ಅವರ ಕುಟುಂಬಕ್ಕೆ
2 ಲಕ್ಷ ರೂ ಪರಿಹಾರವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಂಜೂರು ಮಾಡಿದ್ದಾರೆ.

ಸಂಕಷ್ಟದಲ್ಲಿರುವ ದಯಾನಂದ ಅವರ ಕುಟುಂಬಕ್ಕೆ ನೆರವು ನೀಡುವಂತೆ ದ.ಕ. ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘವು, ರಾಜ್ಯ ಸಂಘಕ್ಕೆ ಮನವಿ ಮಾಡಿತ್ತು.
ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದ ಕೆಯುಡಬ್ಲ್ಯೂಜೆ ಅಧ್ಯಕ್ಷ ಶಿವಾನಂದ ತಗಡೂರು ಅವರು ಪರಿಹಾರಕ್ಕಾಗಿ ಮನವಿ ಮಾಡಿದ್ದರು.

ಸಂಕಷ್ಟದಲ್ಲಿದ್ದ ಪತ್ರಕರ್ತನ ಕುಟುಂಬಕ್ಕೆ 2 ಲಕ್ಷ ಮಂಜೂರು ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೆಯುಡಬ್ಲ್ಯೂಜೆ
ಕೃತಜ್ಞತೆ ಸಲ್ಲಿಸಿದೆ.

error: Content is protected !!