ಮಳೆ ಹಾನಿ ಕುರಿತಂತೆ ಇಂದು ಸಿಎಂ ಮಹತ್ವದ ಸಭೆ – ಕೆಲವು ಜಿಲ್ಲೆಗಳಲ್ಲಿ ಎರಡು ದಿನ ಶಾಲೆ – ಕಾಲೇಜಿಗೆ ರಜೆ

Team Newsnap
1 Min Read

ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆಯಲ್ಲಿ ನಷ್ಟ, ಸಮಸ್ಯೆಗಳಿಗೆ ಪರಿಹಾರ ಕುರಿತಂತೆ
ಸಿಎಂ ಬಸವರಾಜ ಬೊಮ್ಮಾಯಿ ದಿಢೀರ್ ಸಭೆ ಕರೆದಿದ್ದಾರೆ.

ಇಂದು ಮಧ್ಯಾಹ್ನ 1 ಗಂಟೆಗೆ ಮಳೆಹಾನಿ ವಿಚಾರವಾಗಿ ಬಸವರಾಜ ಬೊಮ್ಮಾಯಿ ನಡೆಸುವ ಈ ಸಭೆಯಲ್ಲಿ
ಎಲ್ಲಾ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ನ ಸಿಇಒಗಳು ಪಾಲ್ಗೊಳ್ಳಲಿದ್ದಾರೆ

ಸಿಎಂ ಗೃಹ ಕಚೇರಿ ಕೃಷ್ಣಾದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಮಳೆಹಾನಿ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ.

ಕೆಲವು ಜಿಲ್ಲೆಗಳಲ್ಲಿ ಎರಡು ದಿನ ರಜೆ :

ರಾಜ್ಯಾದ್ಯಂತ ಭಾರೀ ಮಳೆ, ಕೆಲವೆಡೆ ಶಾಲೆಗಳಿಗೆ ರಜೆ ರಾಜ್ಯದ್ಯಾಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಿಸಲಾಗಿದೆ.

ಬೆಂಗಳೂರು ಹಾಗೂ ರಾಮನಗರದಲ್ಲಿ ಒಂದು ದಿನ ಶಾಲೆಗಳಿಗೆ ರಜೆ ನೀಡಲಾಗಿದೆ.

ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ ಜಿಲ್ಲೆಗಳಲ್ಲಿ 2 ದಿನಗಳ ಕಾಲ ಶಾಲೆಗಳಿಗೆ ರಜೆ ನೀಡಲಾಗಿದೆ. ಅಲ್ಲದೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ರಜೆ ಘೋಷಿಸುವ ಅಧಿಕಾರ ನೀಡಲಾಗಿದೆ.

ಇನ್ನೂ ಎರಡು ದಿನ ಭಾರಿ ಮಳೆ :

ಬೆಂಗಳೂರಿನಲ್ಲಿ ಇನ್ನೆರಡು ದಿನ ಮಳೆಯ ಆರ್ಭಟ ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳು ಭಾರಿ ಮಳೆಯಾಗಲಿದೆ.
ಇಂದು ಮತ್ತು ನಾಳೆ ನಗರದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ‌ಮುನ್ಸೂಚನೆ ನೀಡಿದೆ. ಈ ಹಿನ್ನೆಲೆ ಬೆಂಗಳೂರಿನಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

Share This Article
Leave a comment