ಮಂತ್ರಾಲಯ ರಾಯರ ಸನ್ನಿಧಿಯಲ್ಲಿ 3 ಕೋಟಿಗೂ ಅಧಿಕ ಕಾಣಿಕೆ ಸಂಗ್ರಹ

Team Newsnap
1 Min Read

ಗುರುರಾಯರ ಸನ್ನಿಧಿ ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಕಳೆದ ಒಂದು ತಿಂಗಳಿಂದ ಭಕ್ತರಿಂದ ಭಾರೀ ಪ್ರಮಾಣದ ಕಾಣಿಕೆ ಸಂಗ್ರಹವಾಗಿದೆ.

ನವೆಂಬರ್ ಹಾಗೂ ಡಿಸೆಂಬರ್ ತಿಂಗಳ ಕಳೆದ 34 ದಿನಗಳ ಕಾಣಿಕೆ ಹುಂಡಿ ಎಣಿಕೆ ಕಾರ್ಯ ಪೂರ್ಣವಾಗಿದೆ ನಾಣ್ಯ ಹಾಗೂ ನೋಟುಗಳು ಸೇರಿ ಒಟ್ಟು 3 ಕೋಟಿ 30 ಲಕ್ಷದ 20 ಸಾವಿರದ 636 ರೂ. ಕಾಣಿಕೆ ಸಂಗ್ರಹವಾಗಿದೆ. 0.95 ಗ್ರಾಂ ಚಿನ್ನ ಹಾಗೂ 1 ಕೆ.ಜಿ.300 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಬಂದಿದೆ.

ಕಳೆದ ಅಕ್ಟೋಬರ್ ನವೆಂಬರ್ ತಿಂಗಳುಗಳ 36 ದಿನಗಳಲ್ಲಿ 3 ಕೋಟಿ 20 ಲಕ್ಷ ರೂ. ಸಂಗ್ರಹವಾಗಿತ್ತು. ಸೆಪ್ಟೆಂಬರ್ ಅಕ್ಟೋಬರ್ ತಿಂಗಳ 20 ದಿನಗಳಲ್ಲಿ 1,98,17,614 ರೂ. ಸಂಗ್ರಹವಾಗಿತ್ತು.

ಈ ಬಾರಿ 34 ದಿನಗಳ ಕಾಣಿಕೆ ಎಣಿಕೆ ಇದ್ದಿದ್ದರಿಂದ ಸತತವಾಗಿ 2 ದಿನಗಳ ಕಾಲ ನಾಣ್ಯ ಹಾಗೂ ನೋಟುಗಳ ಎಣಿಕೆ ಕಾರ್ಯ ನಡೆಯಿತು. ಎಣಿಕೆ ಕಾರ್ಯ ಸಂಪೂರ್ಣ ಮುಕ್ತಾಯವಾಗಿರುವ ಕುರಿತು ಗುರು ರಾಘವೇಂದ್ರ ಸ್ವಾಮಿ ಮಠದ ವ್ಯವಸ್ಥಾಪಕ ಶ್ರೀನಿವಾಸ ರಾವ್ ಮಾಹಿತಿ ನೀಡಿದ್ದಾರೆ.

Share This Article
Leave a comment