December 22, 2024

Newsnap Kannada

The World at your finger tips!

revenue , lokayukta , Karnataka

ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

Spread the love

ಮೈಸೂರು: ಮನೆ ನಿರ್ಮಾಣಕ್ಕೆ ಖಾತೆ ಮತ್ತು ನಕ್ಷೆ ಅನುಮೋದನೆಗಾಗಿ 40 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಬಿಲ್ ಕಲೆಕ್ಟರ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಬಿಲ್ ಕಲೆಕ್ಟರ್ ದಿನೇಶ್, ನಕ್ಷೆ ಅನುಮೋದನೆಗಾಗಿ ಒಟ್ಟು 2 ಲಕ್ಷ ರೂ. ಲಂಚವನ್ನು ಕೇಳಿದ್ದು, ಮುಂಗಡವಾಗಿ 40 ಸಾವಿರ ರೂ. ಸ್ವೀಕರಿಸುವ ವೇಳೆ ರೆಡ್ ಹ್ಯಾಂಡ್ ಆಗಿ ಹಿಡಿಯಲ್ಪಟ್ಟಿದ್ದಾರೆ.

ಈ ಕಾರ್ಯಾಚರಣೆಯನ್ನು ಲೋಕಾಯುಕ್ತ ಎಸ್‌ಪಿ ಟಿಜೆ ಉದೇಶ್ ಮಾರ್ಗದರ್ಶನದಲ್ಲಿ ಇನ್ಸಪೆಕ್ಟರ್ ರವಿಕುಮಾರ್ ನೇತೃತ್ವದಲ್ಲಿ ನಿರ್ವಹಿಸಲಾಗಿದ್ದು, ದಿನೇಶ್‌ಗೆ ಸಹಕಾರ ನೀಡುತ್ತಿದ್ದ ಮಧ್ಯವರ್ತಿ ಚಂದನ್ ಕೂಡ ವಶಕ್ಕೆ ಪಡೆಯಲಾಗಿದೆ.ಇದನ್ನು ಓದಿ –IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024

ಈ ಘಟನೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ದೂರು ದಾಖಲು ಮಾಡಿದ್ದು, ಮುಂದಿನ ತನಿಖೆ ಮುಂದುವರಿಯುತ್ತಿದೆ.

Copyright © All rights reserved Newsnap | Newsever by AF themes.
error: Content is protected !!