ಸುಧೀರ್ ಅಂಗೂರ್ ಮಾಲೀಕತ್ವದ ಬೆಂಗಳೂರಿನ ಪ್ರತಿಷ್ಠಿತ ಅಲಯನ್ಸ್ ಯುನಿವರ್ಸಿಟಿಯನ್ನು ರಾಜಕಾರಣಿಯೊಬ್ಬರಿಗೆ ಮಾರಾಟ ಮಾಡಲು ಡೀಲ್ ಕುದುರಿಸಿದ ಹಾಗೂ ವಿವಿಗೆ ಗೂಂಡಾಗಳನ್ನು ಕರೆದುಕೊಂಡು ಬಂದು ಬೆದರಿಕೆ ಹಾಕಿದ ಆರೋಪದ ಮೇಲೆ ಮಾಜಿ ಕುಲಪತಿ ಮಧುಕರ್ ಅಂಗೂರ್ ಮತ್ತು ಸ್ಯಾಂಡಲ್ವುಡ್ ನಟಿ ಶ್ರೀಲೀಲಾರ ತಾಯಿ ಸ್ವರ್ಣಲತಾ ವಿರುದ್ಧ ದೂರು ದಾಖಲಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಬೆಂಗಳೂರು ಗ್ರಾಮಾಂತರ ಎಸ್‌ಪಿ ಮಲ್ಲಿಕಾರ್ಜುನ್, ಅಲಯನ್ಸ್ ವಿವಿಯಲ್ಲಿ ಮಧುಕರ್ ಗಲಾಟೆ ಮಾಡಿದ್ದಾರೆ. ಬಲವಂತವಾಗಿ ವಿವಿಯ ಗೇಟ್ ತೆಗೆದು ಒಳನುಗ್ಗಿದ್ದಾರೆ.
5-6 ಜನರ ಜೊತೆ ಹೋಗಿ ಅಲಯನ್ಸ್ ವಿವಿ ನಮಗೆ ಸೇರಿದ್ದು ಎಂದು ಮಧುಕರ್ ಗಲಾಟೆ ನಡೆಸಿದ್ದಾರೆ ಎಂದು ಆರೋಪಿಸಿ ರಿಜಿಸ್ಟ್ರಾರ್ ನಿವೇದಿತಾ ಜೈನ್ ಆನೇಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ವಿವರಿಸಿದರು. ಎಚ್ ಎಸ್ ಮುದ್ದೇಗೌಡರ ಪುತ್ರ- ಕಿರುತೆರೆ ಕಲಾವಿದ ಮಂಡ್ಯ ರವಿ ಪ್ರಸಾದ್ ಇನ್ನಿಲ್ಲ
ವಿಚಾರಣೆ ಬಳಿಕ
ಈ ದೂರಿನಲ್ಲಿ 40-50 ಜನ ಬೌನ್ಸರ್ ಇದ್ದರೆಂದು ತಿಳಿಸಿದ್ದಾರೆ. 4 ಶಸ್ತ್ರಾಸ್ತ್ರ ಇದ್ದವೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಮಧುಕರ್ ಅಂಗೂರ್ ಸೇರಿ 15 ಜನರನ್ನು ವಶಕ್ಕೆ ಪಡೆದಿದ್ದೇವೆ. ಕೂಲಂಕುಷವಾಗಿ ವಿಚಾರಣೆ ಬಳಿಕ ಸತ್ಯಾಂಶ ಗೊತ್ತಾಗುತ್ತೆ ಎಂದು ಹೇಳಿದ್ದಾರೆ.
- ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
- ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
- ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ
- ದೇವತೆಗಳ ಆರಾಧನೆಗೆ ಮೀಸಲಾದ ದೇವಮಾಸ ಮಾರ್ಗಶಿರಮಾಸ
- ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
- ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
More Stories
ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯಾದ್ಯಂತ ಡಿ. 31 ರಿಂದ ಸಾರಿಗೆ ನೌಕರರ ಮುಷ್ಕರ
ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ: ಬೆಂ-ಮೈ ಎಕ್ಸ್ಪ್ರೆಸ್ವೇ ಸಂಚಾರ ಮಾರ್ಗದಲ್ಲಿ ಬದಲಾವಣೆ