ಟೆಂಪೋ ಟ್ರಾವಲರ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 11 ಮಂದಿ ಧಾರುಣ ಸಾವನ್ನಪ್ಪಿದ ಘಟನೆ ಶುಕ್ರವಾರ ಬೆಳಿಗ್ಗೆ ಧಾರವಾಡದ ಸಮೀಪದ ಇಟ್ಟಿಗಟ್ಟಿ ಬಳಿ ಸಂಭವಿಸಿದೆ.
ವೀಣಾ, ರಾಜೇಶ್ವರಿ, ಮಂಜುಳಾ ಸೇರಿದಂತೆ ಇತರ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ ಇನ್ನೂ 10 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರೆಲ್ಲರೂ ದಾವಣಗೆರೆ ಮೂಲದವರು ಎಂದು ತಿಳಿದು ಬಂದಿದೆ.

ಟೆಂಪೋ ಟ್ರಾವಲರ್ ದಾವಣಗೆರೆ ಯಿಂದ ಪಣಜಿಗೆ ಹೋಗುತ್ತಿತ್ತು. ಲಾರಿ ಬೆಳಗಾವಿನಿಂದ ಎದುರು ಮುಖವಾಗಿ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಎಸ್ಪಿ ಕೃಷ್ಣಕಾಂತ್ ಭೇಟಿ ನೀಡಿದರು. ಧಾರವಾಡದ ಗ್ರಾಮಾಂತರ ಪೋಲಿಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು