ಉಗ್ರರು ಹೊಂಚುಹಾಕಿ ನಡೆಸಿದ ದಾಳಿಯಲ್ಲಿ ಮೂವರು ಯೋಧರು ಸಹಿತ ಅಸ್ಸಾಂ 46 ಕಮಾಂಡಿಂಗ್ ಅಧಿಕಾರಿ, ಅವರ ಮಗ, ಪತ್ನಿ ಸೇರಿ ಏಳು ಮಂದಿ ಮೃತಪಟ್ ದುರಂತ ಘಟನೆ ಮಣಿಪುರದ ಸಿಂಘಾತ್‍ನಲ್ಲಿಜರುಗಿದೆ
ಮಣಿಪುರ ಮೂಲದ ಉಗ್ರರ ಗುಂಪು ಪೀಪಲ್ಸ್ ಲಿಬರೇಶನ್ ಆರ್ಮಿ ಈ ದಾಳಿ ನಡೆಸಿರುವ ಬಗ್ಗೆ ಮಾಹಿತಿ ಇದೆ
ಉಗ್ರರ ಗುಂಪು ಏಕಾಏಕಿ ಯೋಧರ ಮೇಲೆ ದಾಳಿ ಆರಂಭಿಸಿದೆ ದಾಳಿಯಲ್ಲಿ 7 ಜನ ಮೃತಪಟ್ಟಿದ್ದು, 3 ಮಂದಿ ಯೋಧರು ತೀವ್ರ ಗಾಯಗೊಂಡು ಸ್ಥಳೀಯ ಬೆಹಿರಂಗ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದಾಳಿಯ ಬಗ್ಗೆ ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ
46 ಅಸ್ಸಾಂ ರೈಫಲ್ಸ್ ಮೇಲೆ ಉಗ್ರರು ಹೇಡಿತನದಿಂದ ಹೊಂಚುಹಾಕಿ ದಾಳಿ ಮಾಡಿರುವುದು ಖಂಡನೀಯ.
ಸಿಸಿಪುರದಲ್ಲಿ ನಡೆದ ಈ ದಾಳಿಯಲ್ಲಿ ಕಮಾಂಡಿಂಗ್ ಅಧಿಕಾರಿ ಮತ್ತು ಅವರ ಕುಟುಂಬ ಹತ್ಯೆಗೀಡಾಗಿದೆ. ಯೋಧರು ಹುತಾತ್ಮರಾಗಿದ್ದು, ಉಗ್ರರನ್ನು ಸೆರೆಹಿಡಿಯಲು ರಾಜ್ಯದ ಭಧ್ರತಾ ಪಡೆಗಳು ಮತ್ತು ಪ್ಯಾರಾಮಿಲಿಟರಿ ಸಿಬ್ಬಂದಿ ಕಾರ್ಯಚರಣೆ ಆರಂಭಿಸಿದ್ದಾರೆ.
ತಪ್ಪಿಸ್ಥರಿಗೆ ಶಿಕ್ಷೆ ಕೊಡಿಸುತ್ತೇವೆ ಎಂದು ಟ್ವಿಟ್ಟರ್ ಮೂಲಕ ಸಂತಾಪ ಸೂಚಿಸಿದ್ದಾರೆ.
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
More Stories
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ