ಹಾಸ್ಯ ನಟ ಮನದೀಪ್ ರಾಯ್ ಹೃದಯಾಘಾತ: ಆಸ್ಪತ್ರೆಗೆ ದಾಖಲು

Team Newsnap
1 Min Read
Comedian Mandeep Roy hospitalized due to heart attack ಹಾಸ್ಯ ನಟ ಮನದೀಪ್ ರಾಯ್ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಕನ್ನಡದಲ್ಲಿ 500 ಹೆಚ್ಚು ಚಿತ್ರಗಳಲ್ಲಿ ನಟಿಸಿರುವ, ಹಾಸ್ಯ ನಟ ಮನದೀಪ್ ರಾಯ್ ಹೃದಯಾಘಾತದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ .

ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಎನ್ ಸಿಪಿ ಸೇರ್ಪಡೆ ಸಾಧ್ಯತೆ?

ಆಪ್ತರು ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದಾರೆ. ಮನದೀಪ್ ರಾಯ್ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದು, ಇನ್ನೂ ಕೆಲವು ದಿನಗಳ ಕಾಲ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಹಲವು ದಶಕಗಳಿಂದ ಹಾಸ್ಯ ಕಲಾವಿದರಾಗಿ ರಂಜಿಸಿರುವ ಮನದೀಪ್ ರಾಯ್, ಅನಂತ್ ನಾಗ್ ಹಾಗೂ ಶಂಕರ್ ನಾಗ್ ಜೊತೆ ಚಿತ್ರರಂಗಕ್ಕೆ ಕಾಲಿಟ್ಟವರ.

ಮಿಂಚಿನ ಓಟ , ಬೆಂಕಿಯ ಬಲೆ, ಆಕಸ್ಮಿಕ, ಏಳು ಸುತ್ತಿನ ಕೋಟೆ, ಆಸೆಗೊಬ್ಬ ಮೀಸೆಗೊಬ್ಬ, ಆಪ್ತ ರಕ್ಷಕ , ಆಂಟಿ ಪ್ರೀತ್ಸೆ , ಪ್ರೀತ್ಸೋದ್ ತಪ್ಪ ಹೀಗೆ ಸಾಕಷ್ಟು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಡಾ.ರಾಜ್ ಕುಮಾರ್ ಅವರಿಂದ ಹಿಡಿದು ಎಲ್ಲಾ ದಿಗ್ಗಜರ ಜೊತೆಯೂ ನಟಿಸಿರುವ ಹೆಗ್ಗಳಿಕೆ ಇದೆ.

Share This Article
Leave a comment