ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಮುಂದಾಗಿರುವ ರಾಜ್ಯ ಸರ್ಕಾರ ಸಮಿತಿಯೊಂದನ್ನು ನೇಮಕ ಮಾಡಿದೆ.
ರಾಜ್ಯದ ನಾಲ್ಕು ಸಾರಿಗೆ ನೌಕರರ ಪ್ರಮುಖ ಬೇಡಿಕೆಗಳಲ್ಲಿ ಸರ್ಕಾರಿ ನೌಕರರು ಎಂದು ಪರಿಗಣಿಸುವುದು ಹಾಗೂ 6 ನೇ ವೇತನ ಆಯೋಗ ಶಿಫಾರಸುಗಳನ್ನು ಜಾರಿ ಮಾಡುವುದನ್ನು ಹೊರತುಪಡಿಸಿ ಉಳಿದ ಬೇಡಿಕೆಗಳ ಸಮಗ್ರ ಪ್ರಸ್ತಾವನೆಯನ್ನು ಸಲ್ಲಿಸಲು ಸಮಿತಿಗೆ ಹೇಳಿದೆ.
ಕೆಎಸ್ ಆರ್ ಟಿಸಿ ಎಂಡಿ ಅವರಿಗೆ ಶೀಘ್ರದಲ್ಲೇ ಈ ಪ್ರಸ್ತಾವನೆಯನ್ನು ಸಲ್ಲಿಸುವ ಜವಾಬ್ದಾರಿ ನೀಡಲಾಗಿದೆ.
ನೌಕರರ ವಿರುದ್ಧ ಕ್ರಮ?
ಈ ನಡುವೆ ನಾಲ್ಕು ದಿನಗಳ ಕಾಲ ಮುಷ್ಕರದಲ್ಲಿ ಪಾಲ್ಗೊಂಡ ನೌಕರರ ವಿರುದ್ದ ಕ್ರಮ ಜರುಗಿಸುವ ಚಿಂತನೆ ನಡೆದಿದೆ. ಅದರಲ್ಲಿ ಈ ನಾಲ್ಕು ದಿನದ ವೇತನ ಕಡಿತಗೊಳಿಸುವ ಬಗ್ಗೆಯೂ ಸಾರಿಗೆ ಇಲಾಖೆ ಆಲೋಚನೆ ಮಾಡುತ್ತಿದೆ ಎಂದು ಹೇಳಲಾಗಿದೆ.
More Stories
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ