July 7, 2022

Newsnap Kannada

The World at your finger tips!

WhatsApp Image 2022 06 16 at 10.47.01 AM

Violence against Kashmiri Pandits protest- Sai Pallavi #thenewsnap #kannadanews #kashmir #sail_pallavi #attack #jai_sriram #latestnews #kashmir_pandit

ನಟಿ ಸಾಯಿ ಪಲ್ಲವಿ ವಿರುದ್ದ ಹೈದ್ರಾಬಾದ್ ಪೋಲಿಸರಿಗೆ ದೂರು ನೀಡಿದ ಭಜರಂಗ ದಳ

Spread the love

ಕಾಶ್ಮೀರ ಪಂಡಿತರ ಹತ್ಯೆ ಮತ್ತು ಜೈ ಶ್ರೀರಾಮ್ ಎಂದು ಹೇಳುತ್ತಾ ಗೋ ಸಾಗಾಣಿ ಮಾಡುತ್ತಿದ್ದು ಮುಸ್ಲಿಂ ಹತ್ಯೆ ಎರಡೂ ಒಂದೇ ಅನಿಸುತ್ತಿದೆ. ಧರ್ಮದ ಹೆಸರಿನಲ್ಲಿ ನಡೆಯುವ ಹತ್ಯೆಗಳನ್ನು ಖಂಡಿಸಬೇಕು ಎಂದು ಹೇಳಿಕೆ ನೀಡಿದ್ದ ದಕ್ಷಿಣದ ತಾರೆ ಸಾಯಿ ಪಲ್ಲವಿ ವಿರುದ್ಧ ದೂರು ದಾಖಲಾಗಿದೆ.

ಕಾಶ್ಮೀರಿ ಪಂಡಿತರ ಹತ್ಯೆಗೆ ಗೋವು ಕಳ್ಳಸಾಗಾಣಿಕೆಯನ್ನು ಹೋಲಿಸಿರುವುದು ಸರಿಯಲ್ಲ ಎಂದು ವಾದ ನಡೆದಿದೆ. ಸಾಯಿ ಪಲ್ಲವಿ ಮಾತಿಗೆ ಪರ ವಿರೋಧ ವ್ಯಕ್ತವಾಯಿತು. ಕಳ್ಳಸಾಗಾಣಿಕೆದಾರನಿಗೆ ಕಾಶ್ಮೀರಿ ಪಂಡಿತರ ಹತ್ಯೆಯನ್ನು ಹೋಲಿಸಿದ್ದಕ್ಕಾಗಿ ಭಜರಂಗ ದಳದ ನಾಯಕರು, ಹೈದರಾಬಾದ್ ನ ಸುಲ್ತಾನ್ ಬಜಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ

ಇದನ್ನು ಓದಿ –ಸ್ಯಾಂಡಲ್​ವುಡ್ ನಟಿಗೆ ವಿಲನ್ ಆದ ವೈದ್ಯೆ- ಗೊಂಬೆಯಂತಿದ್ದ ಮುಖ ಗೂಬೆಯಂತೆ ಮಾಡಿದಳು ವೈದ್ಯೆ !

ನಾನು ಸಮಸಮಾಜದ ಕನಸು ಕಂಡಿರುವ ಹುಡುಗಿ. ಯಾವುದೇ ಪಕ್ಷದ ಪರವಾಗಿ ಕೆಲಸ ಮಾಡುವುದಿಲ್ಲ. ಜಾತಿ, ಧರ್ಮಗಳ ಬಡಿದಾಟಕ್ಕೂ ನಾನು ಸಿದ್ಧಳಿಲ್ಲ. ಸಮಾಜದಲ್ಲಿ ಎಲ್ಲರೂ ಒಗ್ಗಟ್ಟಿನಿಂದಲೇ ಬದುಕಬೇಕು. ಧರ್ಮಗಳ ಕಚ್ಚಾಟ ಏಕೆ? ಯಾರದೋ ಲಾಭಕ್ಕಾಗಿ ಆಗುತ್ತಿರುವ ದಾಳಿಯಿದು ಅಂತ ನನಗೆ ಅನಿಸುತ್ತಿದೆ ಎಂದು ಸಾಯಿ ಪಲ್ಲವಿ ಮಾತನಾಡಿದ್ದಾರೆ.

error: Content is protected !!