ವರದಕ್ಷಿಣೆ ಕಿರುಕುಳ ನೀಡಿ , ಮಾತ್ರೆ ಬೆರೆಸಿದ ನೀರನ್ನು ಪತ್ನಿಗೆ ಕುಡಿಸಿ ಕೊಲ್ಲುವ ಸಂಚು ರೂಪಿದ್ದ. ಕೆಎಎಸ್ ಅಧಿಕಾರಿ ಜಿ.ಟಿ. ದಿನೇಶ್ ಕುಮಾರ್ ವಿರುದ್ಧ ಬೆಂಗಳೂರಿನ ಆರ್.ಆರ್ . ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ನನ್ನನ್ನ ಕೊಲ್ಲಲು ಸಂಚು ರೂಪಿಸಿ ಮಾತ್ರೆ ಬೆರೆಸಿದ್ದ ನೀರನ್ನು ನನ್ನ ಗಂಡನೇ ಕುಡಿಸಿದ್ದಾನೆ ಎಂದು ಕೆಎಎಸ್ ಅಧಿಕಾರಿ ಪತ್ನಿ ಕೆ.ಪಿ.ದೀಪ್ತಿ ದೂರು ನೀಡಿದ್ದಾರೆ.
ಬಿಜಿಎಸ್ ಆಸ್ಪತ್ರೆಯಲ್ಲಿ ದೀಪ್ತಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಸಂತೆಬೆನ್ನೂರು ನಿವಾಸಿ ದಿನೇಶ್ ಕುಮಾರ್ ಜತೆ ದೀಪ್ತಿ 2015ರಲ್ಲಿ ಮದುವೆಯಾಗಿದ್ದರು. ಮದುವೆ ಸಂದರ್ಭದಲ್ಲಿ ದಿನೇಶ್ ಸಾಕಷ್ಟು ವರದಕ್ಷಿಣೆ ಪಡೆದಿದ್ದರು.
ಕಳೆದ ವರ್ಷದಿಂದ ಮತ್ತೆ ವರದಕ್ಷಿಣೆ ತರುವಂತೆ ನನ್ನ ಗಂಡ ಕಿರುಕುಳ ಕೊಡುತ್ತಿದ್ದರು ಎಂದು ದೀಪ್ತಿ ದೂರಿನಲ್ಲಿ ತಿಳಿಸಿದ್ದಾರೆ.
ದಿನೇಶ್ ಕುಮಾರ್ ಹಾಗೂ ಅವರ ಸಹೋದರನ ಪತ್ನಿ ರಮ್ಯ ವಿರುದ್ಧ ದೂರು ನೀಡಿದ್ದಾರೆ.
ಕೆಎಎಸ್ಅಧಿಕಾರಿ ವಿರುದ್ಧವೇ ವರದಕ್ಷಿಣೆ ಕಿರುಕುಳ ಮತ್ತು ಕೊಲೆ ಯತ್ನ ಕೇಸ್ ದಾಖಲಾಗಿದೆ.
ಈ ಕುರಿತಂತೆ ಪೋಲಿಸ್ ತನಿಖೆ ಮುಂದುವರೆದಿದೆ.
- ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 6 ಜನರ ಮೃತದೇಹ ಪತ್ತೆ
- ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
- ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ
- ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ
- ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ: ಚುನಾವಣೆಯ ಮೂಲಕ ತೀರ್ಮಾನ
More Stories
ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ
ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ