ಸಾಗರದ ಸಿಪಿಐ ಅಶೋಕ್ ಕುಮಾರ್ ಜ್ಯೂಸ್‍ನಲ್ಲಿ ಮತ್ತಿನ ಔಷಧಿ ನೀಡಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿರುವ ದೂರು ದಾಖಲಾಗಿದೆ.
ಸಾಗರ ಪೊಲೀಸ್ ಠಾಣೆಯ ಸಿಪಿಐ ಅಶೋಕ್ ಕುಮಾರ್ ಕಳೆದ ನಾಲ್ಕು ವರ್ಷದಿಂದ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ.
ಪೊಲೀಸರಿಗೆ ದೂರು ನೀಡಿದ್ದಕ್ಕೆ ಕೊಲೆ ಬೆದರಿಕೆ ಹಾಗೂ ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ರೇಪ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.
ಸದ್ಯ ಅಶೋಕ್ ಕುಮಾರ್ ವಿರುದ್ಧ ಐಪಿಸಿ ಕಲಂ 354(ಎ), 376 (ಸಿ), 417, 504, 506ರ ಅಡಿ ಪ್ರಕರಣ ದಾಖಲಾಗಿದೆ.
ಪ್ರಕರಣದ ಹಿನ್ನೆಲೆ:
ಪ್ರಕರಣವೊಂದಕ್ಕೆ ದೂರು ಸಲ್ಲಿಸಲು ಮಹಿಳೆಯೊಬ್ಬಳು ಠಾಣೆಗೆ ಬಂದಿದ್ದರು. ಈ ವೇಳೆ ಮಹಿಳೆಯ ಫೋನ್ ನಂಬರ್ ಪಡೆದಿದ್ದ, ಅಶೋಕ್ ಪರಿಚಯ ಮಾಡಿಕೊಂಡು ಸಲುಗೆ ಬಳಸಿಕೊಂಡಿದ್ದ ಎಂದು ಮಹಿಳೆ ಹೇಳಿದ್ದಾರೆ.
ಜ್ಯೂಸ್ ನಲ್ಲಿ ಮತ್ತು ಬರುವ ಔಷಧಿ ನೀಡಿ ಅತ್ಯಾಚಾರ ಎಸಗಲಾಗಿದೆ. ಅಶ್ಲೀಲ ಫೋಟೋ ಮತ್ತು ವೀಡಿಯೋಗಳನ್ನು ಮಾಡಿಕೊಂಡು ಬ್ಲಾಕ್‍ಮೇಲ್ ಮಾಡಿದ್ದಾನೆ.
ಬೆದರಿಸಿ ತಾನು ಹೇಳಿರುವ ಸ್ಥಳಕ್ಕೆ ಕರಸಿಕೊಂಡು ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.
ಪ್ರಕರಣದ ತನಿಖೆ ಮುಂದುವರೆದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ