ಮಂಡ್ಯ : ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ದ ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿರುವ ವಿಚಾರ, ಮಂಡ್ಯ ಜಂಟಿ ಕೃಷಿ ಜಂಟಿ ನಿರ್ದೇಶಕ ಅಶೋಕ್, ಮಂಡ್ಯ SPಗೆ ದೂರು ನೀಡಿದರು.
ರಾಜ್ಯಪಾಲರಿಗೆ ಸಹಾಯಕ ಕೃಷಿ ಜಂಟಿ ನಿರ್ದೇಶಕರು ದೂರು ನೀಡಿಲ್ಲ. ಆ ಸಂಬಂಧ ನಾನು ಖುದ್ದಾಗಿ ವಿಚಾರಿಸಿದ್ದೇನೆ. ಸಚಿವರಾಗಲಿ, ಅಧಿಕಾರಿಗಳಾಗಲಿ ಯಾರು ಹಣಕ್ಕೆ ಬೇಡಿಕೆ ಇಟ್ಟಿಲ್ಲ. ದೂರು ಪ್ರತಿಯಲ್ಲಿನ ಸಹಿ ಕೂಡ ನಮ್ಮದಲ್ಲ ಎಂದು ಸ್ಪಷ್ಟಪಡಿಸಿದರು. ಯಾರಿಗೆ ಆದರೂ ಇದು ಒಳ್ಳೆಯದಲ್ಲ. ನಮ್ಮ ಜಿಲ್ಲೆಯ ಯಾವ ಅಧಿಕಾರಿಗಳೂ ಈ ರೀತಿ ಮಾಡೋಲ್ಲ. ಇದೊಂದು ಫೇಕ್ ಲೆಟರ್. ತನಿಖೆ ಆಗಬೇಕು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು ನನ್ನ ವಿರುದ್ದದ- ಷಡ್ಯಂತ್ರ, ಪಿತೂರಿಗಳಿಗೆ ಯಾವುದೇ ಫಲ ದಕ್ಕುವುದಿಲ್ಲ : ಚಲುವರಾಯಸ್ವಾಮಿ
ಸಚಿವರ ವಿರುದ್ಧ ಕೃಷಿ ಅಧಿಕಾರಿಗಳಿಂದ ರಾಜ್ಯ ಪಾಲರಿಗೆ ದೂರು ನೀಡಿರುವುದರ ಹಿಂದೆ ಜಿಲ್ಲೆಯ JDS ಮಾಜಿ ಶಾಸಕರ ಕೈವಾಡವಿದೆ ಎಂದು ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಗಂಭೀರವಾಗಿ ಆರೋಪಿಸಿದರು. ರಾಜಕೀಯ ದುರುದ್ದೇಶದಿಂದ ನಮ್ಮ ಅಧಿಕಾರಿಗಳ ಹೆಸರಲ್ಲಿ ರಾಜ್ಯಪಾಲರಿಗೆ ನಕಲಿ ದೂರು ಸಲ್ಲಿಸಿರುವ ಸಾಧ್ಯತೆ ಇದ್ದು, ಆದ್ದರಿಂದ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಕೃಷಿ ಸಚಿವರ ವಿರುದ್ಧ ರಾಜ್ಯಪಾಲರಿಗೆ ಕೊಟ್ಟ ದೂರು ನಮ್ಮದಲ್ಲ : ಕೃಷಿ ನಿರ್ದೇಶಕ ಸ್ಪಷ್ಟನೆ – complaint against the Agri Minister to Governor is fake : JD of Agri clarifies #agriculture #karnataka #jds #congress #bjp #mandya #mysore #india #bengaluru #agrinews #cheluvarayaswamy #siddaramaiha
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ