ಬೆಂಗಳೂರಿನ ಸಿವಿಲ್ ಕೋರ್ಟ್ ಆವರಣದಲ್ಲಿ ತನ್ನ ಮೇಲೆ ಮಸಿ ಬಳಿದಿದ್ದ ವಕೀಲೆ ಮೀರಾ ರಾಘವೇಂದ್ರ ವಿರುದ್ಧ ಸಾಹಿತಿ ಭಗವಾನ್ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮೀರಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಮೀರಾ ವಿರುದ್ದ ಐಪಿಸಿ ಸೆಕ್ಷನ್ 341(ಅಕ್ರಮವಾಗಿ ತಡೆಯವುದು), 504(ಅವಾಚ್ಯವಾಗಿ ನಿಂದನೆ)ಅಡಿ ಪ್ರಕರಣ ದಾಖಲಾಗಿದೆ.
ಪ್ರಕರಣ ದಾಖಲಾದ ಬಳಿಕ ಭಗವಾನ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ವಕೀಲೆ ಮೀರಾ ರಾಘವೇಂದ್ರ ಖಾಸಗಿ ದೂರು ದಾಖಲಿಸಿದ್ದರು.
ಇಂದು ಈ ಪ್ರಕರಣ ಸಂಬಂಧ ಜಾಮೀನು ವಿಚಾರಣೆಗೆ ಭಗವಾನ್ ಕೋರ್ಟ್‌ಗೆ ಆಗಮಿಸಿದ್ದರು. ಈ ವೇಳೆ ಮೀರಾ ರಾಘವೇಂದ್ರ ಭಗವಾನ್ ಮುಖಕ್ಕೆ ಮಸಿ ಬಳಿದಿದ್ದಾರೆ.
ಬುದ್ಧಿಜೀವಿ, ಧರ್ಮ ವಿರೋಧಿ ಪ್ರೊ ಭಗವಾನ್ ಇಂದು ಕೋರ್ಟ್ ಕಟಕಟೆಗೆ ಹಾಜರಾಗಿ ಜಾಮೀನು ಪಡೆದುಕೊಂಡರು. ಅವರಿಗೆ ಮಸಿ ಬಳಿದು ತಕ್ಕ ಶಾಸ್ತಿ ಮಾಡಿದ್ದೇನೆ. ಜೈಶ್ರೀರಾಮ್ ಎಂದು ಮೀರಾ ರಾಘವೇಂದ್ರ ಟ್ವೀಟ್ ಮಾಡಿ ವಿಡಿಯೋ ಅಪ್ಲೋಡ್ ಮಾಡಿದ್ದಾರೆ.
ಹಿಂದೂ ಧರ್ಮವೆಂಬುದೆ ಇಲ್ಲ. ಹಿಂದೂ ಧರ್ಮ ಅವಮಾನಕಾರ. ಮಾನ ಮರ್ಯಾದೆ ಇದ್ದವರು ಹಿಂದೂ ಧರ್ಮ ಬಳಸಬಾರದು ಎಂದು ಭಗವಾನ್ ಹೇಳಿಕೆ ನೀಡಿದ್ದರು. ಈ ಸಂಬಂಧ 2020ರ ಅಕ್ಟೋಬರ್ 10 ರಂದು ಭಗವಾನ್ ವಿರುದ್ಧ ಮೀರಾ ರಾಘವೇಂದ್ರ ಕ್ರಿಮಿನಲ್ ಕೇಸ್ ಹೂಡಿದ್ದರು. ಈ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಭಗವಾನ್‌ಗೆ ಕೋರ್ಟ್ ಸಮನ್ಸ್ ಜಾರಿ ಮಾಡಿತ್ತು.
- KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು
- ವರದಕ್ಷಿಣೆ ಕಿರುಕುಳ ತಾಳಲಾರದೇ ಮಹಿಳೆ ಆತ್ಮಹತ್ಯೆ – ಪತಿ ವಿಷ ಸೇವಿಸಿ ಆತ್ಮಹತ್ಯೆ ಯತ್ನ
- ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
- ಮೈಸೂರು ಜೈಲಿನಲ್ಲಿ ಮೂವರು ಕೈದಿಗಳ ದುರ್ಮರಣ
- ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!
More Stories
KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು
ವರದಕ್ಷಿಣೆ ಕಿರುಕುಳ ತಾಳಲಾರದೇ ಮಹಿಳೆ ಆತ್ಮಹತ್ಯೆ – ಪತಿ ವಿಷ ಸೇವಿಸಿ ಆತ್ಮಹತ್ಯೆ ಯತ್ನ
ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ