ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಸ್ನೇಹಮಯಿ ಕೃಷ್ಣ, “ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಕುಟುಂಬ ಭಾಗಿಯಾಗಿರುವ ಕುರಿತು ಸಾಕಷ್ಟು ಸಾಕ್ಷಿ, ಆಧಾರಗಳು ಇದ್ದರೂ, ಆರೋಪಿಗಳನ್ನು ರಕ್ಷಣೆ ಮಾಡಲು ಲೋಕಾಯುಕ್ತ ಪೊಲೀಸರು ಸುಳ್ಳು ವರದಿಗಳನ್ನು ಸಲ್ಲಿಸಿದ್ದರು. ಈ ಬಗ್ಗೆ ಈ ಮೂವರು ಲೋಕಾಯುಕ್ತ ಎಡಿಜಿಪಿ ಮನೀಷ್ ಖರ್ಬೀಕರ್, ಐಜಿಪಿ ಸುಬ್ರಮಣ್ಯೇಶ್ವರ್ ರಾವ್, ಹಾಗೂ ಮೈಸೂರು ಲೋಕಾಯುಕ್ತ ಎಸ್‌ಪಿ ಟಿ.ಜೆ.ಉದ್ದೇಶ್ ವಿರುದ್ಧ ಕೇಂದ್ರದ ಜಾಗೃತ ಆಯೋಗಕ್ಕೆ ಮೂರು ಪುಟದ ದೂರನ್ನು ಇಮೇಲ್ ಹಾಗೂ ರಿಜಿಸ್ಟರ್ ಅಂಚೆ ಮೂಲಕ ಕಳುಹಿಸಿದ್ದೇನೆ” ಎಂದು ಸ್ನೇಹಮಯಿ ಕೃಷ್ಣ ತಿಳಿಸಿದರು.
“ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ವರದಿಯನ್ನು ಸಂಪೂರ್ಣವಾಗಿ ಪರಿಶೀಲನೆ ಮಾಡಿದ್ದೇನೆ. ಈ ವರದಿಯಲ್ಲಿ ಲೋಕಾಯುಕ್ತ ಪೊಲೀಸರು ಯಾವುದೇ ದಾಖಲಾತಿಗಳನ್ನು ಪರಿಶೀಲಿಸದೆ, ಯಾರನ್ನೋ ರಕ್ಷಣೆ ಮಾಡಲು ಸುಳ್ಳು ವರದಿ ತಯಾರಿಸಿ ನೀಡಿದ್ದಾರೆ ಎಂದರು
ಸಿದ್ದರಾಮಯ್ಯ ಅವರ ಭಾಮೈದ ಮಲ್ಲಿಕಾರ್ಜುನ ಸ್ವಾಮಿ 1998ರಲ್ಲಿ ಪ್ರಕರಣದ ಎ4 ಆರೋಪಿ ದೇವರಾಜ್ ಹೆಸರಿನಲ್ಲಿ ಸುಳ್ಳು ಪತ್ರ ಸೃಷ್ಟಿಸಿದ್ದ. ಆ ಪತ್ರಕ್ಕೆ ದೇವರಾಜು ಸಹಿಯನ್ನು ಮಲ್ಲಿಕಾರ್ಜುನ ಸ್ವಾಮಿ ಮಾಡಿ, ಅಪರಾಧ ಕೃತ್ಯವೆಸಗಿದ್ದಾರೆ. ಈ ದಾಖಲೆಗಳು ವರದಿಯಲ್ಲಿ ಇವೆ. ಆದರೂ ಇದೆಲ್ಲ ಸಾಕ್ಷಿಗಳು ಇದ್ದರೂ, ಲೋಕಾಯುಕ್ತದ ಐಪಿಎಸ್ ಅಧಿಕಾರಿಗಳು ಸಾಕ್ಷಿಯಿಲ್ಲ ಎಂದು ಸುಳ್ಳು ವರದಿ ನೀಡಿದ್ದಾರೆ. ಯಾರನ್ನೋ ರಕ್ಷಣೆ ಮಾಡಲು ಈ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಕೇಂದ್ರ ಜಾಗೃತಿ ಆಯೋಗಕ್ಕೆ ದೂರು ಸಲ್ಲಿಸಿದ್ದೇನೆ” ಎಂದು ಸ್ನೇಹಮಯಿ ಕೃಷ್ಣ ಮಾಹಿತಿ ನೀಡಿದರು.ಇದನ್ನು ಓದಿ –ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರ
ಇನ್ನೂ ಲೋಕಾಯುಕ್ತ ವರದಿಯ ವಿರುದ್ಧ ಮೇಲ್ಮನವಿ ಸಲ್ಲಿಸಿದ್ದು, ಇದರ ಬಗ್ಗೆ ಇನ್ನೂ ದಿನಾಂಕ ನಿಗಧಿಯಾಗಿಲ್ಲ. ನ್ಯಾಯಾಲಯದ ಮುಂದೆ ಬಂದ ನಂತರ ದಾಖಲೆ ಸಮೇತ ಈ ವಿಚಾರವನ್ನು ಕೋರ್ಟ್ಗೆ ಮನವರಿಕೆ ಮಾಡಿಕೊಡುತ್ತೇನೆ. ಮುಡಾ ಹಗರಣದ ಸಮಗ್ರ ತನಿಖೆ ನಡೆಸುವಂತೆ ಈ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಹೈಕೋರ್ಟ್ನಲ್ಲಿ ಮನವಿ ಮಾಡಿರುವ ವಿಚಾರದಲ್ಲಿ ವಕೀಲರು ವಾದ ಮಂಡಿಸುತ್ತಾರೆ. ಹಾಗೂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಾನು ವಾದ ಮಂಡಿಸುತ್ತೇನೆ” ಎಂದು ಹೇಳಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ