November 15, 2024

Newsnap Kannada

The World at your finger tips!

muraga durga

ಮುರುಘಾ ಸ್ವಾಮೀಜಿಗೆ ಚಿಕಿತ್ಸೆ ನೀಡಿದ್ದ ವೈದ್ಯಾಧಿಕಾರಿ ಸೇರಿ ಮೂವರ ವಿರುದ್ಧ ಲೋಕಾಯುಕ್ತಕ್ಕೆ ದೂರು

Spread the love

ಮುರುಘಾ ಮಠದ ಸ್ವಾಮೀಜಿಗೆ ಚಿಕಿತ್ಸೆ ನೀಡಿದ ವೈದ್ಯಾಧಿಕಾರಿ ಸೇರಿ ಮೂವರ ವಿರುದ್ಧ ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ವೈದ್ಯಾಧಿಕಾರಿ ಡಾ.ರಂಗನಾಥ್, ಆಸ್ಪತ್ರೆಯ ಸರ್ಜನ್ ಡಾ.ಎಸ್.ಕೆ ಬಸವರಾಜ್, ಕಾರಾಗೃಹ ಅಧಿಕಾರಿ ಎಂ.ಎಂ ಮರಕಟ್ಟಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.

ಈ ಮೂವರು ತಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡು ಕರ್ತವ್ಯಲೋಪ ಎಸಗಿದ್ದಾರೆ, ಪ್ರಭಾವಿ ಆರೋಪಿಯ ರಕ್ಷಣೆ ಮಾಡುವ ಹುನ್ನಾರವನ್ನೂ ನಡೆಸಿದ್ದಾರೆ. ಹಾಗಾಗಿ ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ದೂರಿನಲ್ಲಿ ಹೇಳಿದ್ದಾರೆ.

ಮೊದಲನೇ ಆರೋಪಿ ಸ್ವಾಮೀಜಿ ನ್ಯಾಯಾಂಗ ಬಂಧನಲ್ಲಿದ್ದರು. ಈ ವೇಳೆ ತುಂಬಾ ಎದೆ ನೋವಿದೆ ಎಂದ ತಕ್ಷಣ ನ್ಯಾಯಾಲಯದ ಗಮನಕ್ಕೂ ತರದೆ ಚಿತ್ರದುರ್ಗ ಜಿಲ್ಲಾಸತ್ರೆಗೆ ಮುಂಜಾನೆ ದಾಖಲಿಸಿ ಚಿಕಿತ್ಸೆ ನಿಡಲು ಮುಂದಾಗಿದ್ದರು. ಚಿಕಿತ್ಸೆ ನೀಡುವ ಹಂತದಲ್ಲಿ ಅಲ್ಲಿನ ವೈದ್ಯಾಧಿಕಾರಿ ಇವರಿಗೆ ತೀವ್ರ ತರವಾದ ಹೃದಯ ಸಂಬಂಧಿ ಕಾಯಿಲೆ ಇದೆ ಎಂದು ಸುಳ್ಳು ಹೇಳಿ, ದಾಖಲೆಗಳನ್ನೂ ಸೃಷ್ಟಿಸಿ ದಾವಣಗೆರೆಯ ಖಾಸಗಿ ಹೃದಯ ತಜ್ಞರನ್ನು ಕರೆಸಿ ಆರೋಪಿಗೆ ತೀವ್ರತರವಾದ ಎದೆ ನೋವಿದೆ, ಹೃದಯಕ್ಕೆ ಘಾಸಿಯಾಗಿದೆ.

ಬ್ರಿಟನ್‍ನ ನೂತನ ಪ್ರಧಾನಿಯಾಗಿ ಲಿಜ್ ಟ್ರಸ್ ಆಯ್ಕೆ : ರಿಷಿ ಸುನಾಕ್ ಗೆ ಸೋಲು

ಈ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲು ಹೆಚ್ಚಿನ ವೈದ್ಯಕೀಯ ಸೌಲಭ್ಯವಿಲ್ಲ, ಇವರನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿ ವಿಶೇಷ ಚಿಕಿತ್ಸೆ ನೀಡಬೇಕೆಂದು ಹೇಳಿದ್ದಾರೆ. ತಕ್ಷಣ ಆರೋಪಿಯನ್ನು ಐಸಿಯುನಲ್ಲಿ ದಾಖಲಿಸಿ, ಹೆಲಿಕಾಪ್ಟರ್ ಮೂಲಕ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸುವ ಹುನ್ನಾರವನ್ನೂ ನಡೆಸಿದ್ದರು.

ಪ್ರಭಾವಿ ಸ್ಥಾನದಲ್ಲಿರುವ ಈ (ಸ್ವಾಮೀಜಿ )ಆರೋಪಿಯ ರಕ್ಷಣೆಗೆ ನಿಂತ ಈ ಸರ್ಕಾರದ ಅಧಿಕಾರಿಗಳಾದ ಜಿಲ್ಲಾ ಕಾರಾಗೃಹ ಅಧೀಕ್ಷಕಿ ಎಂ.ಎಂ ಮರಕಟ್ಟಿ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ರಂಗನಾಥ್, ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ.ಎಸ್.ಕೆ ಬಸವರಾಜ್ ಕರ್ತವ್ಯ ಲೋಪವೆಸಗಿ ಆರೋಪಿಯ ಜೊತೆ ಶಾಮೀಲಾಗಿ ಬೃಹತ್ ನಾಟಕ ಆಡಿರುತ್ತಾರೆ. ಇಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!