ಜಲ್ ಜೀವನ್ ಮಿಷನ್ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳಿಸಿ: ಸಂಸದೆ ಸುಮಲತಾ

Team Newsnap
2 Min Read
Complete Jal Jeevan Mission work soon: MP Sumalatha ಜಲ್ ಜೀವನ್ ಮಿಷನ್ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳಿಸಿ: ಸಂಸದೆ ಸುಮಲತಾ #mandya

ಮಂಡ್ಯ : ಜಲ್ ಜೀವನ್ ಮಿಷನ್ ಯೋಜನೆಯಡಿ ಕೈಗೊಂಡಿರುವ ಕಾಮಗಾರಿ ಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಸಂಸದೆ ಸುಮಲತಾ ತಿಳಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ದಿಶಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಲ್ ಜೀವನ್ ಮಿಷನ್ ಯೋಜನೆಯಡಿ 3 ಹಂತದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ಕೆಲವು ಕಾಮಗಾರಿಗಳನ್ನು ಗುತ್ತಿಗೆದಾರರು ಪೂರ್ಣಗೊಳಿಸದೇ ಅರ್ಧಕ್ಕೆ ಬಿಟ್ಟಿರುವವರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದರು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ಜಲ್ ಜೀಚನ್ ಯೋಜನೆಗೆ ಸಂಬಂಧಿಸಿದಂತೆ ಎರಡು ಪೈಪ್ ಲೈನ್ ಇರುವ ಬಗ್ಗೆ ಚರ್ಚಿಸಿದಾಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮಾತನಾಡಿ ಜಲ್ ಜೀವನ್ ಮಿಷನ್ ಮುಂದಿನ 30 ವರ್ಷಗಳ ಅವಧಿಗೆ ಆಯೋಜಿಸಲಾಗುತ್ತದೆ. ಕೆಲವು ಹಿಂದೆ ನಿರ್ಮಿಸಿರುವ ಪೈಪ್ ಲೈನ್ ಹಳೆಯದಾಗಿದ್ದು, ಯೋಜನೆಗೆ ಅನುಗುಣವಾಗಿ ನೀರು ಸರಬರಾಜು ಮಾಡುವುದು ಕಷ್ಟಕರವಾಗಿರುತ್ತದೆ ಎಂದು ಮಾಹಿತಿ ನೀಡಿದರು.

ಸಂಸದರು ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ಯಲ್ಲಿ ಹೆಚ್ಚು ಅಪಘಾತವಾಗುತ್ತಿದೆ, ಇದಕ್ಕೆ ಸಂಬಂಧಿಸಿದಂತೆ ಮೀಡಿಯನ್ ಗುಣಮಟ್ಟ ಹೆಚ್ಚಿಸುವುದು, ರಸ್ತೆ ದೀಪಗಳು, ಸೂಚನಾ ಪಲಕಗಳು ಹೆಚ್ಚಿಸುವ ಕುರಿತು ಈಗಾಗಲೇ ಸೂಚನೆ ನೀಡಲಾಗಿದೆ, ಅವುಗಳನ್ನು ಅನುಷ್ಠಾನವಾಗಬೇಕು. ಬೆಂಗಳೂರು ಮೈಸೂರು ಹೆದ್ದಾರಿ ಕುರಿತಂತೆ ಜನರಿಂದ ಟೋಲ್ ಸಂಗ್ರಹಣೆ ಮಾಡಲಾಗುತ್ತಿತ್ತು, ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡುವ ಸಂದರ್ಭದಲ್ಲಿ ಒಪ್ಪಿಕೊಂಡಿರುವ ಎಲ್ಲಾ ಕಾಮಗಾರಿಗಳು ಹಾಗೂ ಸೌಲಭ್ಯಗಳನ್ನು ಒದಗಿಸಬೇಕು.

ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕುರಿತಂತೆ ಚರ್ಚಿಸಲಾಗಿರುವ ವಿಷಯಗಳ ಬಗ್ಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ನೀಡುವಂತೆ ಎನ್‌ಹಚ್‌ಎ.ಐ ಪಿ.ಡಿ ಅವರಿಗೆ ತಿಳಿಸಿದರು.

ಜಿಲ್ಲಾಧಿಕಾರಿ ಡಾ: ಕುಮಾರ ಅವರು ಮಾತನಾಡಿ ಈಗಾಗಲೇ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯನ್ನು ಪರಿಶೀಲಿಸಿದ ಸಂದರ್ಭದಲ್ಲಿ ಮುಖ್ಯವಾಗಿ ಲೇನ್ ವೇಗ, ಸೂಚನಾ ಪಲಕ ಅಳವಡಿಸುವಂತೆ ತಿಳಿಸಲಾಗಿದೆ ಹಾಗೂ 1525 ಬೀದಿ ದೀಪ‌ದ ಅವಶ್ಯಕತೆ ಇದ್ದು ಕೇವಲ 850 ಮಾತ್ರ ಅಳವಡಿಸಲಾಗಿದೆ. ಹೈ ವೇ ಪ್ಯಾಟ್ರೋಲಿಂಗ್, ಅಂಬೂಲೆನ್ಸ್ ಹಾಗೂ ಕ್ರೇನ್ ಗಳ ಸಂಖ್ಯೆ ಹೆಚ್ಚಳ ಮಾಡುವಂತೆ ತಿಳಿಸಲಾಗಿದೆ ಎಂದರು.

ಮಳೆಯ ಕೊರತೆ ಉಂಟಾದರೆ ಹಾಲಿ ಬೆಳೆಗೆ ನೀರು ಒದಗಿಸುವ ಬಗ್ಗೆ ಹಾಗೂ ಕುಡಿಯುವ ನೀರಿನ ಬಗ್ಗೆ ಸಂಸದರು ಮಾಹಿತಿ ಕೇಳಿದಾಗ ಕಾವೇರಿ ನೀರಾವರಿ ನಿಗಮ ನಿಯಮಿತದ ಅಧೀಕ್ಷಕ ಇಂಜಿನಿಯರ್ ರಘುರಾಮ್ ಅವರು ಮಾತನಾಡಿ ಸದರಿ ಪರಿಸ್ಥಿತಿಯಲ್ಲಿ ಮಳೆಯ ಅಭಾವ ಉಂಟಾದರೆ ಜುಲೈ‌ ಅಂತ್ಯದವರೆಗೆ ಮಾತ್ರ ಬೆಳೆಗಳಿಗೆ ನೀರು ಒದಗಿಸಲು ಸಾಧ್ಯ. ನೀರಾವರಿ ಸಲಹಾ ಸಮಿತಿಗೆ ಮಾಹಿತಿ ನೀಡಲು ಕೃಷಿ, ನೀರಾವರಿ ಹಾಗೂ ಕಂದಾಯ ಇಲಾಖೆ ಒಟ್ಟಿಗೆ ಸಮೀಕ್ಷೆ ನಡೆಸಿ ವರದಿ ನೀಡಲಿದೆ ಎಂದರು.ಮಂಡ್ಯ ವಿಶ್ವವಿದ್ಯಾಲಯ ಉನ್ನತೀಕರಣಕ್ಕೆ ಕ್ರಮ -ಚಲುವರಾಯಸ್ವಾಮಿ

ಸಭೆಯಲ್ಲಿ ಮಂಡ್ಯ ಶಾಸಕ ರವಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಅರಣ್ಯ ಅಧಿಕಾರಿ ರುದ್ರನ್ ಉಪಸ್ಥಿತರಿದ್ದರು.

Share This Article
Leave a comment