ಚಾಮರಾಜ ನಗರ ಜಿಲ್ಲೆಯಲ್ಲಿ ದಿನೇ ದಿನೇ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವದರಿಂದ, ಜಿಲ್ಲೆಯ ಪ್ರವಾಸಿ ತಾಣಗಳಾದ ಮಲೆ ಮಹದೇಶ್ವರ ಬೆಟ್ಟ, ಹಿಮವದ್‌ಗೋಪಾಲ ಸ್ವಾಮಿ ಬೆಟ್ಟ, ಬಿಳಿಗಿರಿ ರಂಗನ ಬೆಟ್ಟ, ವನ್ಯಜೀವಿ ಧಾಮ, ಶಿವನಸಮುದ್ರ, ಬಂಡೀಪುರದಂತಹ ಪ್ರವಾಸಿ ತಾಣಗಳಿಗೆ ಭೇಟಿ ನೀಡಬಯಸುವ ಪ್ರವಾಸಿಗರಿಗೆ ಆರೋಗ್ಯ ಇಲಾಖೆಯು ಅಕ್ಟೋಬರ್ 18 ರಿಂದ ಕೋವಿಡ್ ಪರೀಕ್ಷೆಯನ್ನು ಕಡ್ಡಾಯವಾಗಿ ನಡೆಸಲಿದೆ.
ಜಿಲ್ಲೆಯಲ್ಲಿ ಅನೇಕ ಜನ ಕೊರೋನಾದಿದಂದ ಬಳಲುತ್ತಿದ್ದಾರೆ. ಹಾಗಾಗಿ ವಾರಾಂತ್ಯದಲ್ಲಿ ಪ್ರವಾಸಿತಾಣಗಳಿಗೆ ಭೇಟಿನೀಡುವ ಪ್ರವಾಸಿಗಳಿಗೆ ಕೊರೋನಾ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎನ್ನುತ್ತಾರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಡಾ. ಎಂ.ಸಿ. ರವಿ.
ಪ್ರವಾಸಿಗಳ ಕೊರೋನಾ ಪರೀಕ್ಷೆಗಾಗಿ ಇತರೆ ಸರ್ಕಾರಿ ಇಲಾಖೆಗಳ ಸಹಕಾರದೊಂದಿಗೆ ಆರೋಗ್ಯ ಇಲಾಖೆಯ ಪ್ರತ್ಯೇಕ ತಂಡಗಳನ್ನು ರಚಿಸಲಾಗುತ್ತಿದೆ. ಪ್ರವಾಸಿಗಳನ್ನು ಪ್ರವೇಶದ್ವಾರದಲ್ಲಿಯೇ ನಿಲ್ಲಿಸಿ, ಕೊರೋನಾ ಪರೀಕ್ಷೆ ಮಾಡಿಸಲಾಗುವುದು. ಬೇರೆ ಜಿಲ್ಲೆಯ ಪ್ರವಾಸಿಗರಲ್ಲಿ ಕೊರೋನಾ ಸೋಂಕು ಕಂಡುಬಂದಲ್ಲಿ ಆ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ವರದಿ ನೀಡಲಾಗುವುದು ಎನ್ನುತ್ತಾರೆ ಡಾ. ಎಂ.ಸಿ. ರವಿ.
More Stories
2025ರ ಕರ್ನಾಟಕ SSLC ಮಾದರಿ ಪ್ರಶ್ನೆಪತ್ರಿಕೆ ಪ್ರಕಟ
KPSC ಮೂಲಕ ಕೃಷಿ ಇಲಾಖೆಯಲ್ಲಿ 945 ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ
1.20 ಲಕ್ಷ ಲಂಚ ಸ್ವೀಕಾರ : ಲೋಕಾಯುಕ್ತ ಬಲೆಗೆ ಬಿದ್ದ ನೀರಾವರಿ ನಿಗಮದ ಅಧಿಕಾರಿಗಳು