December 22, 2024

Newsnap Kannada

The World at your finger tips!

Daily posts 35

conflict between DKshi and ashwath Narayan ಬೆಂಗಳೂರು ನಂದೇ! ಡಿಕೆಶಿ- ಅಶ್ವತ್ಥ ವಾಗ್ವಾದ

ಬೆಂಗಳೂರು ನಂದೇ! ಡಿಕೆಶಿ- ಅಶ್ವತ್ಥ ವಾಗ್ವಾದ

Spread the love
  • ಇಬ್ಬರಿಗೂ ತಿಳಿವಳಿಕೆ ಹೇಳಿದ ಆದಿಚುಂಚನಗಿರಿ ಶ್ರೀಗಳು

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಸಚಿವ ಅಶ್ವತ್ಥ ನಾರಾಯಣ ನಡುವೆ ಬೆಂಗಳೂರು ಯಾರದ್ದು!? ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತಿನ ಚಕಮಕಿ ನಡೆಯಿತು.

ಇವರಿಬ್ಬರ ವಾಗ್ವಾದಕ್ಕೆ ಆದಿಚುಂಚನಗಿರಿ ಶ್ರೀಗಳು ಸಾಕ್ಷಿಯಾಗುವಂತಹ ಸನ್ನಿವೇಶ ಸೃಷ್ಟಿಯಾಯಿತು.
ಸದಾಶಿವನಗರದ ರಮಣಮಹರ್ಷಿ ಉದ್ಯಾನವನದಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಇಬ್ಬರೂ ರಾಜಕಾರಣಿಗಳು ತಮ್ಮ ಸ್ವಪ್ರತಿಷ್ಠೆ ಮೆರೆಯಲು ಬಳಸಿಕೊಂಡರು.

ನನಗೂ ಬೆಂಗಳೂರಿಗೂ ಇರುವ ಸಂಬಂಧದ ಬಗ್ಗೆ ಅಶ್ವತ್ ನಾರಾಯಣಗೆ ಗೊತ್ತಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ನಾನು 6ನೇ ವಯಸ್ಸಿಗೆ ಶಿಕ್ಷಣ ಪಡೆಯಲು ನಮ್ಮೂರಿನಿಂದ ಬೆಂಗಳೂರಿಗೆ ಬಂದೆ. ಇಲ್ಲಿನ ರಾಜಾಜಿನಗರದ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಸೇರಿ ವಿದ್ಯಾಭ್ಯಾಸ ಮಾಡಿದೆ. ಬೆಂಗಳೂರು ಕೋಟೆ ಸಮೀಪ ನನ್ನ ತಂದೆ ದೊಡ್ಡಆಲಹಳ್ಳಿ ಕೆಂಪೇಗೌಡರ ಮನೆ ಇದೆ. ಇತ್ತೀಚೆಗೆ ಅದನ್ನು ಮಾರಿದ್ದೇನೆ.

ಇದು ನನಗೂ ಕೆಂಪೇಗೌಡ ಕಟ್ಟಿದ ಬೆಂಗಳೂರಿಗೆ ಇರುವ ಸಂಬಂಧ ಎಂದು ಹೇಳಿದರು.
ಬಳಿಕ ಮಾತನಾಡಿದ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು, ನಾನು ಡಿ.ಕೆ.ಶಿವಕುಮಾರ್ ಅವರನ್ನು ಪ್ರಶ್ನೆ ಮಾಡಲು ಒಂದು ಕಾರಣವಿದೆ. ಅವರು ನನಗೂ ರಾಮನಗರಕ್ಕೂ ಏನು ಸಂಬಂಧ ಎಂದು ಪ್ರಶ್ನೆ ಮಾಡಿದ್ದರು. ಯಾವ ಸರ್ಕಾರವೂ ಕೊಡದಷ್ಟು ಯೋಜನೆಗಳನ್ನು ನಾನು ರಾಮನಗರಕ್ಕೆ ಕೊಟ್ಟಿದ್ದೇನೆ. ರಾಮನಗರ ಅಭಿವೃದ್ಧಿ ಮಾಡಿದ್ದೇವೆ ಎಂದರು.

ಈ ನಡುವೆ ನಾಯಕರಿಬ್ಬರೂ ವೇದಿಕೆಯಲ್ಲೇ ಪರಸ್ಪರ ಮಾತಿನ ವರಸೆ ತೋರಿಸಿದ ಬಳಿಕ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಶ್ರೀಗಳು ಮಾತನಾಡಿ, ಇಬ್ಬರೂ ಪರಸ್ಪರ ದ್ಚೇಷ ಬೆಳೆಸಿಕೊಳ್ಳದಂತೆ ಕಿವಿಮಾತು ಹೇಳಿದರು. ಪರಸ್ಪರ ದ್ವೇಷ, ಜಟಾಪಟಿ ಬೇಡ. ಅಭಿವೃದ್ಧಿಗೆ ಪರಸ್ಪರ ಸಹಕಾರ ಇರಲಿ ಎಂದು ಶ್ರೀಗಳು ತಿಳಿಸಿದರು.
ಬೆಂಗಳೂರಿನಲ್ಲಿ ಕೆಂಪೇಗೌಡರು, ಕೆಂಗಲ್ ಹನುಮಂತಪ್ಪ, ಬಾಲಗಂಗಾಧರನಾಥ ಸ್ವಾಮೀಜಿ ಯಾಕೆ ಹುಟ್ಟಿದರು ಅಂತೆಲ್ಲ ಚರ್ಚೆ ಮಾಡೋಕೆ ಆಗಲ್ಲ. ಈ ಪುಣ್ಯಭೂಮಿಯಲ್ಲಿ ಹುಟ್ಟಿದ್ದಾರೆ. ಕಳಪೆ ಗುಣಮಟ್ಟದ ರಸಗೊಬ್ಬರ ಮಾರಾಟ ಮಾಡಿದರೆ ಕ್ರಮ: ಎನ್ ಚಲುವರಾಯಸ್ವಾಮಿ

ಅವರವರ ಧರ್ಮಕಾರ್ಯ ನಡೆಸಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು. ನಾವು ಬೆಂಗಳೂರಿನ ಅಭಿವೃದ್ಧಿ ವಿಚಾರದಲ್ಲಿ ಮೂವರು ಮಹನೀಯರನ್ನು ಸ್ಮರಿಸಬೇಕು. ಕೆಂಪೇಗೌಡ, ಕೆಂಗಲ್ ಹನುಮಂತಯ್ಯ ಹಾಗೂ ಎಸ್.ಎಂ ಕೃಷ್ಣ. ಇವರು ಕಟ್ಟಿರುವ ಬೆಂಗಳೂರನ್ನು ಉಳಿಸಿಕೊಂಡು ಬೆಳೆಸಿಕೊಂಡು ಹೋಗಬೇಕು. ನಾವು ನಮ್ಮ ಕೆಲಸಗಳ ಮೂಲಕ ಸಾಕ್ಷಿಗುಡ್ಡೆ ನಿರ್ಮಿಸಬೇಕು ಎಂದರು.

Copyright © All rights reserved Newsnap | Newsever by AF themes.
error: Content is protected !!