ಎಸ್‌ಟಿಜಿ ಪಿಯು ಕಾಲೇಜಿನಲ್ಲಿ ಅಭಿನಂದನಾ ಸಮಾರಂಭ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಧ್ಯಕ್ಷ ಪುಟ್ಟರಾಜು ಬಹುಮಾನ ವಿತರಣೆ

Team Newsnap
1 Min Read

ಚಿನಕುರಳಿಯ ಎಸ್‌ಟಿಜಿ ಪದವಿ ಪೂರ್ವ ಕಾಲೇಜಿನಲ್ಲಿ ೨೦೧೯-೨೦ನೇ ಸಾಲಿನಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ದ್ವಿತೀಯ ಪಿಯುಸಿಯ ೪೮ ವಿದ್ಯಾರ್ಥಿಗಳು ಹಾಗೂ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರು ಹಾಗೂ ಮೇಲುಕೋಟೆ ವಿಧಾನ ಸಭಾ ಸದಸ್ಯ ಸಿ.ಎಸ್.ಪುಟ್ಟರಾಜುರವರು ನೆನಪಿನ ಕಾಣಿಕೆ ನೀಡಿ ಅಭಿನಂದಿಸಿದರು.

ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಕುಮಾರಿ ಚಂದನ.ಕೆ.ಎಸ್ ಹಾಗೂ ೧೦ನೇ ತರಗತಿಯ ಕುಮಾರಿ ಗಾನವಿ.ಜಿ.ಸಿ ವಿದ್ಯಾರ್ಥಿನಿಯರಿಗೆ ತಲಾ ೧೦ ಗ್ರಾಂ ಚಿನ್ನದ ನಾಣ್ಯ ನೀಡುವುದರ ಮೂಲಕ ವಿಶೇಷವಾಗಿ ಅಭಿನಂದಿಸಲಾಯಿತು.

ಈ ವೇಳೆ ಮಾತನಾಡಿದ ಶಾಸಕ ಸಿ.ಎಸ್.ಪುಟ್ಟರಾಜು, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಶಿಕ್ಷಣದ ಮೂಲಕ ಗುರುತಿಸುವಂತಾಗಬೇಕು ಅದಕ್ಕಾಗಿ ನಮ್ಮ ಸಂಸ್ಥೆಯಲ್ಲಿ ಶೈಕ್ಷಣಿಕವಾಗಿ ಯಾವುದೇ ಕೊರತೆ ಬಾರದಂತೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು.

ನಂತರ ಮೈಸೂರು ಮಹಾಜನ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಪ್ರೊ.ತಿಮ್ಮೇಗೌಡರು ವಿದ್ಯಾರ್ಥಿಗಳಿಗೆ ಹಿತವಚನ ನೀಡಿದರು.

ಸಂಸ್ಥೆಯ ಸಿಇಓ ಶಿವರಾಜು.ಸಿ.ಪಿ. ಮಾತನಾಡಿ ವಿದ್ಯಾರ್ಥಿಗಳು ಉತ್ತಮ ಭವಿಷ್ಯಕ್ಕಾಗಿ ಅನುಸರಿಸಬೇಕಾದ ಮಾರ್ಗಗಳನ್ನು ತಿಳಿಸಿದರು. ನಂತರ ಗಣಿತ, ಜೀವಶಾಸ್ತ್ರ ಹಾಗೂ ಭೌತಶಾಸ್ತ್ರದಲ್ಲಿ ೧೦೦ ಕ್ಕೆ ೧೦೦ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲ ಮಾರುತಿ.ಟಿ ಡಾ.ರಘುಸ್ವಾಮಿ ಸುಬ್ರಹ್ಮಣ್ಯ ಶ್ರೀಮತಿ ಹೇಮಲತಾ ರವರು ನೆನಪಿನ ಕಾಣಿಕೆ ನೀಡಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲೆ ಶ್ರೀಮತಿ ಮಾಚಮ್ಮ, ಆಡಳಿತಾಧಿಕಾರಿ ಶ್ರೀಮತಿ ನಿವೇದಿತಾ ನಾಗೇಶ್, ಸಿಬ್ಬಂದಿ ವರ್ಗ,ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿತು.

Share This Article
Leave a comment