January 6, 2025

Newsnap Kannada

The World at your finger tips!

prathp simha m

ಸಂಸದ ಸಿಂಹ ಕಚೇರಿಯತ್ತ ಕತ್ತೆ- ಹಂದಿಗಳ ಜೊತೆ ಕಾಂಗ್ರೆಸ್ ನಾಯಕರ ಮೆರವಣಿಗೆ – ಪೋಲಿಸರ ತಡೆ

Spread the love

ಅಭಿವೃದ್ಧಿ ವಿಚಾರದಲ್ಲಿ ಸಂಸದ ಪ್ರತಾಪ್ ಸಿಂಹ ಮತ್ತು ಕಾಂಗ್ರೆಸ್ ನಡುವಿನ ಜಟಾಪಟಿ ಪರಿಣಾಮ ಕಾಂಗ್ರೆಸ್ ಕಚೇರಿ ಆವರಣದಿಂದ ಸಂಸದ ಕಚೇರಿವರೆಗೆ ವಕ್ತಾರ ಎಂ.ಲಕ್ಷ್ಮಣ್ ನೇತೃತ್ವದಲ್ಲಿ ಕತ್ತೆ ಜೊತೆ ಮೆರವಣಿಗೆ ಆರಂಭವಾಗಿದೆ.

ಆದರೆ ಪ್ರತಿಭಟನೆಗೆ ಮುಂದಾಗಿದ್ದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರನ್ನು ದಾಸಪ್ಪ ವೃತ್ತದಲ್ಲಿ ಪೊಲೀಸರು ತಡೆದರು. ಈ ವೇಳೆ ಪರಸ್ಪರ ಮಾತಿನ ಚಕಮಕಿ ನಡೆದಿದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ರನ್ನು ಪೊಲೀಸರು ವಶಕ್ಕೆ ಪಡೆದರು.

ಈ ವೇಳೆ ಕಾಂಗ್ರೆಸ್ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ವಶಕ್ಕೆ ಪಡೆದಿದ್ದ ಎಂ ಲಕ್ಷ್ಮಣ್ ರನ್ನು ಪೊಲೀಸರು ಬಿಡುಗಡೆಗೊಳಿಸಿದ್ದಾರೆ.

ಪೊಲೀಸರ ವಶದಿಂದ ಬಿಡುಗಡೆಗೊಳ್ಳುತ್ತಿದ್ದಂತೆ ಎಂ.ಲಕ್ಷ್ಮಣ್ ಅವರು ಸಂಸದ ಪ್ರತಾಪ್ ಸಿಂಹಗೆ ವೀಡಿಯೋ ಕಾಲ್ ಮಾಡಿದ್ದು, ಆದರೆ ವಿಡಿಯೋ ಕಾಲ್ ಅನ್ನು ಪ್ರತಾಪ್ ಸಿಂಹ ಸ್ವೀಕರಿಸಿಲ್ಲ ಎನ್ನಲಾಗಿದೆ.

ನಾಲ್ಕನೇ ಬಾರಿಗೆ ಸಂಸದರಿಗೆ ಬಹಿರಂಗ ಚರ್ಚೆಗೆ ಸವಾಲು ಹಾಕಿದ್ದರೂ ನಮ್ಮನ್ನು ಎದುರಿಸುವಲ್ಲಿ ವಿಫಲರಾಗಿದ್ದಾರೆ. ಅವರು ಯಾವಾಗಲೂ ಹಿಟ್ ಅಂಡ್ ರನ್ ಹೇಳಿಕೆಗಳನ್ನು ನೀಡಿ ಸಮಸ್ಯೆಯನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸುತ್ತಾರೆ. ನಾನು ದಾಖಲೆಗಳೊಂದಿಗೆ ಬಂದಿದ್ದೇನೆ, ಆದರೆ ಸಂಸದರು ನಮ್ಮನ್ನು ಎದುರಿಸಲು ನಿರಂತರವಾಗಿ ವಿಫಲರಾಗಿದ್ದಾರೆ ಎಂದು ಅವರು ಹೇಳಿದರು.

ಈ ವರ್ಷಾಂತ್ಯಕ್ಕೆ ಬೈಯಪ್ಪನಹಳ್ಳಿ- ವೈಟ್‌ಫೀಲ್ಡ್ ಮೆಟ್ರೋ ಸೇವೆ ಆರಂಭ

ಹಂದಿ ವಿಜಯನಗರ ಸಾಮ್ರಾಜ್ಯದ ರಾಜ ಲಾಂಛನವಾಗಿದೆ. ಕತ್ತೆಯನ್ನು ವೃತ್ತಿಪರ ಕೆಲಸಕ್ಕಾಗಿ ಬಳಸಲಾಗುತ್ತದೆ, ಇದು ಮಡಿವಾಳಸಮುದಾಯವನ್ನು ಪ್ರತಿನಿಧಿಸುತ್ತದೆ. ಪ್ರತಾಪ್ ಸಿಂಹ ಅವರ ಹೇಳಿಕೆಗಳು ಈ ಸಮುದಾಯಗಳ ಭಾವನೆಗಳಿಗೆ ಧಕ್ಕೆ ತಂದಿವೆ ಎಂದು ಅವರು ಆರೋಪಿಸಿದರು.

Copyright © All rights reserved Newsnap | Newsever by AF themes.
error: Content is protected !!