December 27, 2024

Newsnap Kannada

The World at your finger tips!

cycle jath

ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಸೈಕಲ್ ಜಾಥಾ

Spread the love

ತೈಲ, ಎಲ್‌ಪಿಜಿ ಸಿಲೆಂಡರ್ ದರ ಹೆಚ್ಚಳ ವಿರೋಧಿಸಿ ಇತ್ತೀಚಿಗೆ ಎತ್ತಿನಬಂಡಿ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ಇಂದು ಸೈಕಲ್ ಜಾಥಾ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿತು.


ಬೆಂಗಳೂರಿನ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಿಂದ ವಿಧಾನಸೌಧದವರೆಗೆ ನಡೆದ ಸೈಕಲ್ ಜಾಥಾದಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್. ಆರ್. ಪಾಟೀಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾಜಿ ಸಚಿವ ರಾಮಲಿಂಗಾರೆಡ್ಡಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಮತ್ತಿತರ ಪ್ರಮುಖರು ಭಾಗವಹಿಸಿದ್ದರು.

ಸಿದ್ದರಾಮಯ್ಯ ಸೈಕಲ್ ಓಡಿಸುವಾಗ ಭದ್ರತಾ ಸಿಬ್ಬಂದಿಯೊಬ್ಬರು ನೆರವಿಗೆ ಬಂದ್ದದ್ದು ಕಂಡುಬಂತು. ಪೊಲೀಸರು ಸೂಕ್ತ ಬಂದೋಬಸ್ತ್ ಮಾಡಿದ್ದರು. ಈ ಪ್ರತಿಭಟನೆಯಿಂದಾಗಿ ಕೆಲ ಕಾಲ ಸುಗಮ ವಾಹನಗಳ ಸಂಚಾರಕ್ಕೆ ಅಡಚಣೆಯಾಯಿತು.

Copyright © All rights reserved Newsnap | Newsever by AF themes.
error: Content is protected !!