June 9, 2023

Newsnap Kannada

The World at your finger tips!

Kolar , Congress , JDS

Siddaramaiah vows to defeat the former CM in the Kolar contest ಸಿದ್ದರಾಮಯ್ಯ ಕೋಲಾರ ಸ್ಪರ್ಧೆಗೆ ದಳಪತಿಗಳ ಖೆಡ್ಡಾ –ಮಾಜಿ ಸಿಎಂ ಸೋಲಿಸಲು ಶಪಥ

ಬಿಜೆಪಿ ಜೊತೆ ಕಾಂಗ್ರೆಸ್ ಡೀಲ್ : ಸಿದ್ದರಾಮಯ್ಯ ಬಣ್ಣ ಬಯಲು – ಹೆಚ್‌ಡಿಕೆ ಬಾಂಬ್

Spread the love

ಮಾಜಿ C M ಸಿದ್ದರಾಮಯ್ಯನವರ ಬಣ್ಣ ಬಯಲಾಗಿದೆ. ಬಿಜೆಪಿಯನ್ನು ಗೆಲ್ಲಿಸಲು ಕಾಂಗ್ರೆಸ್ ಮುಂದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಇದನ್ನು ಓದಿ –ಕುಬೇರ ಕುಪೇಂದ್ರ : ಪುಟ್ಟರಾಜು, ಜಮೀರ್ ಸೇರಿ ದೇವೇಗೌಡರ ಫ್ಯಾಮಿಲಿಗೆನೇ ಸಾಲ ಕೊಟ್ಟ ಇಂದ್ರ !

ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಕುಮಾರಸ್ವಾಮಿ, ಸಿಟಿ ರವಿ ಕಾಂಗ್ರೆಸ್ ಕಚೇರಿಗೆ ಧನ್ಯವಾದ ತಿಳಿಸಿಲು ತೆರಳಿದ್ದರು. ಬಿಜೆಪಿ ಬಿ ಟೀಂ ಯಾವುದು ಎಂಬುದು ಈಗ ಗೊತ್ತಾಗಿದೆ. ಈಶ್ವರಪ್ಪ ಅವರು ಸಿದ್ದರಾಮಯ್ಯ ನಮ್ಮನ್ನು ಗೆಲ್ಲಿಸುತ್ತಾರೆ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಬಣ್ಣ ಬಯಲಾಗಿದೆ ಎಂದರು

ಸಿದ್ದರಾಮಯ್ಯ ಅಲ್ಪಸಂಖ್ಯಾತ ಅಭ್ಯರ್ಥಿ ಹೆಸರಿನಲ್ಲಿ ಅನುಕಂಪ ಗಿಟ್ಟಿಸಲು ಹೋಗಿ, ಖೆಡ್ಡಾಗೆ ಬಿದ್ದಿದ್ದಾರೆ. ಇನ್ನೊಂದು ನಾಚಿಕೆಗೇಡಿನ ವಿಷಯ ಎಂದರೆ, ಪತ್ರ ಬರೆದಿದ್ದಾರೆ ಹಾಗೂ ಟ್ವೀಟ್ ಮಾಡಿ ಮತ ಹಾಕುವಂತೆ ಮನವಿ ಮಾಡಿದ್ದಾರೆ. ಸಿದ್ದರಾಮಯ್ಯ ಬಿಜೆಪಿಯನ್ನು ಗೆಲ್ಲಿಸಲು ಹೊರಟಿದ್ದಾರೆ ಆಕ್ರೋಶ ಹೊರ ಹಾಕಿದ್ದಾರೆ

ನಕಲಿ ಕಾಂಗ್ರೆಸಿನವರು, ನಕಲಿ ಜಾತ್ಯತೀತ. 2ನೇ ಪ್ರಾಶಸ್ತ್ಯದ ಮತ ಕೂಡಾ ಹಾಕಬೇಡಿ ಎಂದು ಹೇಳಿದ್ದಾರೆ. ಶ್ರೀನಿವಾಸ್ ಗೌಡ ಕಾಂಗ್ರೆಸ್‌ಗೆ ಮತ ಹಾಕುತ್ತೇನೆ ಎಂದಿದ್ದಾರೆ ಹಾಗೂ ರಮೇಶ್ ಕುಮಾರ್ ಬ್ರೈನ್ ವಾಶ್ ಮಾಡಿದ್ದಾರೆ. ಇದು ಹೆಸರಿಗೆ ಮಾತ್ರ ಪಕ್ಷಾಂತರ ನಿಷೇಧ, ಈ ನಿಯಮ ಯಾವುದೇ ಉಪಯೋಗಕ್ಕೂ ಬರುವುದಿಲ್ಲ ಎಂದು ಕಿಡಿ ಕಾರಿದರು.

ಜೆಡಿಎಸ್ ಪಕ್ಷ ಮತ್ತೆ ಪುಟಿದು ನಿಲ್ಲುತ್ತದೆ. 31 ಶಾಸಕರು ನಮ್ಮ ಅಭ್ಯರ್ಥಿಗೆ ಮತ ಹಾಕುತ್ತಾರೆ. 32ರ ಪೈಕಿ 31 ಮತ ನಮಗೆ ಬರಲಿದೆ. ಈ ಬಗ್ಗೆ ನನಗೆ ಯಾವುದೇ ಸಂಶಯ ಇಲ್ಲ ಎಂದರು.

ಕಳೆದ ಬಾರಿ ಅಡ್ಡ ಮತದಾನ ಮಾಡಿದವರಿಗೆ ಜನ ಪಾಠ ಕಲಿಸಿದ್ದಾರೆ. ಈಗಲೂ ಅವರಿಗೆ ಪಾಠ ಕಲಿಸುತ್ತಾರೆ. ಕಾಂಗ್ರೆಸ್‌ನವರಿಗೆ ಹೊಸ ಅಧ್ಯಾಯ ಶುರು ಮಾಡೋಣ ಎಂದು ಹೇಳಿದ್ದೆ, ಆದರೆ ಅವರು ಒಪ್ಪಲಿಲ್ಲ. ಅವರಿಗೆ ಜಾತ್ಯತೀತ ಪಕ್ಷಗಳು ಉಳಿಯುವುದು ಇಷ್ಟ ಇಲ್ಲ. ಈಗ ಕಾಂಗ್ರೆಸ್ ಬಣ್ಣ ಬಯಲಾಗಿದೆ. ಇನ್ನು ಮುಂದೆ ನಾವು ಅವರೊಂದಿಗೆ ಹೋಗಲ್ಲ. ಸ್ವತಂತ್ರ್ಯವಾಗಿಯೇ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

error: Content is protected !!