‘ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ಮಗ ವಿಜಯೇಂದ್ರ 666 ಕೋಟಿ ರುಗಳ ಭ್ರಷ್ಟಾಚಾರ ನಡೆದಿದೆ. ಈ ಕಾರಣಕ್ಕಾಗಿ ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ನೀಡಬೇಕು’ ಎಂದು ರಾಜ್ಯ ಕಾಂಹ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ ಬುಧವಾರ ಒತ್ತಾಯಿಸಿದರು.
ಕೆಪಿಸಿಸಿ ಕಛೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಣದೀಪ್ ಸಿಂಗ್ ‘ಮುಖ್ಯಮಂತ್ರಿ ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರೆಯುವ ನೈತಿಕತೆ ಕಳೆದುಕೊಂಡಿದ್ದಾರೆ. ಮುಖ್ಯಮಂತ್ರಿಯವರ ಮಗ, ಅಳಿಯ ಹಾಗೂ ಮೊಮ್ಮಗ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. 666 ಕೋಟಿ ರೂಪಾಯಿಗಳನ್ನು RTGS ಮೂಲಕ ವರ್ಗಾವಣೆ ಮಾಡಿಸಿಕೊಂಡಿದ್ದಕ್ಕೆ ನಮ್ಮ ಬಳಿ ಆಧಾರಗಳಿವೆ. ಸುಮ್ಮನೇ ಹೇಳುತ್ತಿಲ್ಲ’ ಎಂದು ಹೇಳಿದರು.
‘ಸಿಎಂ ಕುಟುಂಬದವರ ಹಗರಣದ ಬಗೆಗಿನ ಎಲ್ಲ ದಾಖಲೆಗಳನ್ನು ನನಗೆ ಸಿದ್ದರಾಮಯ್ಯ ನೀಡಿದ್ದಾರೆ. ಇದು ಭಾರತೀಯ ದಂಡ ಸಂಹಿತೆ ೧೨೩ರನ್ವಯ ಅಪರಾಧ ಪ್ರಕರಣವಾಗಿದೆ. ಅಲ್ಲದೇ ಭಾರತೀಯ ದಂಡ ಸಂಹಿತೆ ೩೦೨ನ್ನು ಈ ಪ್ರಕರಣದ ಮೂಲಕ ಉಲ್ಲಂಘನೆ ಮಾಡಲಾಗಿದೆ. ಇಷ್ಟಾದರೂ ಆದಾಯ ತೆರಿಗೆ ಇಲಾಖೆ ಏಕೆ ಸುಮ್ಮನಿದೆ? ಎಸಿಬಿ ಏನು ಮಾಡುತ್ತಿದೆ? ಆದಷ್ಟು ಬೇಗ ಇವರ ಮೇಲೆ ಕ್ರಮ ತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿದರು.
ಮುಖ್ಯಮಂತ್ರಿ ಯಡಿಯೂರಪ್ಪ ನವರಿಗೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದ ಅವರು ‘ಯಡಿಯೂರಪ್ಪನವರು ಮುಖ್ಯಮಂತ್ರಿ ಪದವಿಯಲ್ಲಿ ಇದ್ದರೆ ಸಾಕ್ಷ್ಯಗಳನ್ನು ತಿರುಚುವ ಕೆಲಸ ಮಾಡುತ್ತಾರೆ. ಹಾಗಾಗಿ ಕೂಡಲೇ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಹೈಕಮಾಂಡೇ ಅವರನ್ನು ಪದಚ್ಯುತಿಗೊಳಿಸಬೇಕು’ ಎಂದು ಆಗ್ರಹಿಸಿದ್ದಾರೆ.
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )