ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದಾಗ ಪೋಲಿಸರು ಮಧ್ಯದಲ್ಲೇ ತಡೆದರು ಈ ವೇಳೆ ಪ್ರತಿಭಟನಾಕಾರರು ತಡೆಯಲು ಹಾಕಿದ್ದ ಬ್ಯಾರಿಕೇಡ್ ಹತ್ತಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪೊಲೀಸರ ಮೇಲೆ ಜಂಪ್ ಮಾಡಿದ ಪ್ರಸಂಗ ನಡೆಯಿತು.
ಎಸ್.ಈಶ್ವರಪ್ಪ ರಾಜೀನಾಮೆ ನೀಡಬೇಕು. ಇಲ್ಲವೇ ಸರ್ಕಾರ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಾಯಕರು ಗುರುವಾರ ನಗರದಲ್ಲಿ ರ‍್ಯಾಲಿ ನಡೆಸಿದರು.
ಇದೇ ವೇಳೆ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ರೇಸ್ ವ್ಯೂವ್ ಹೋಟೆಲ್ ಬಳಿ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.
ಈ ವೇಳೆ ಬ್ಯಾರಿಕೇಡ್ ಹತ್ತಿದ ಡಿಕೆಶಿ, ಪೊಲೀಸರ ಮೇಲೆಯೇ ಜಿಗಿದಿದ್ದಾರೆ. ತಕ್ಷಣ ಪೊಲೀಸರು, ಡಿ.ಕೆ.ಶಿವಕುಮಾರ್ ಕೆಳಗೆ ಬೀಳದಂತೆ ಹಿಡಿದುಕೊಂಡಿದ್ದಾರೆ. ನಂತರ ಎಲ್ಲರನ್ನೂ ವಶಕ್ಕೆ ಪಡೆದ ಘಟನೆ ನಡೆಯಿತು.
ಕಾಂಗ್ರೆಸ್ ಭವನದಿಂದ ಹೊರಟ ಪ್ರತಿಭಟನಾಕಾರರು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದರು.
ಈ ವೇಳೆ ಪೊಲೀಸರು, ಕಾಂಗ್ರೆಸ್ ನಾಯಕರ ಮನವೊಲಿಸಲು ಪ್ರಯತ್ನಿಸಿದರು. ಬೆಂಗಳೂರು ಕೇಂದ್ರ ಡಿಸಿಪಿ ಅನುಚೇತ್ ಸದಾಶಿವನಗರದಲ್ಲಿ ಡಿಕೆಶಿ ನಿವಾಸಕ್ಕೆ ಭೇಟಿ ಮಾಡಿದ್ದರು. ಆದರೆ ಅವರ ಮನವೊಲಿಕೆಗೆ ಬಗ್ಗದ ಕಾಂಗ್ರೆಸ್ ನಾಯಕರು ರ‍್ಯಾಲಿ ನಡೆಸಿದರು.
ಈ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಶಾಸಕ ಪ್ರಿಯಾಂಕ್ ಖರ್ಗೆ ಸೇರಿದಂತೆ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
- ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
- ಮುಡಾ ಹಗರಣ: ಬದಲಿ ನಿವೇಶನ ಹಂಚಿಕೆಯಲ್ಲಿ ಅವ್ಯವಹಾರ, ತನಿಖಾ ವರದಿ ಆಧರಿಸಿ ಸರ್ಕಾರದ ಕ್ರಮ
More Stories
ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ