ಪ್ರಸ್ತುತ ಅಂಗೀಕಾರವಾಗಿರುವ ಮಸೂದೆಗಳು ರೈತರಿಗೆ ಅನೇಕ ತೊಂದರೆಗಳನ್ನು ತಂದೊಡ್ಡಲಿವೆ ಎಂದು ರೈತ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ.
‘ರೈತ ವಿರೋಧಿ ಕೃಷಿ ಕಾಯ್ದೆ ಹಾಗೂ ಕೃಷಿ ಮಸೂದೆಗಳ ವಿರುದ್ಧ ರೈತ ಸಂಘಟನೆಗಳು ಕೈಗೊಳ್ಳುತ್ತಿರುವ ಕರ್ನಾಟಕ ಬಂದ್‌ಗೆ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ಸೂಚಿಸಲಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಈ ಮಸೂದೆಗಳು ರೈತರಿಗೆ ಹಾಗೂ ಕಾರ್ಮಿಕರಿಗೆ ಮರಣ ಶಾಸನವಾಗಲಿವೆ ಎಂದು ಡಿಕೆಶಿ ಹೇಳಿದರು.
ಇದೇ ಹಿನ್ನೆಲೆಯಲ್ಲಿ ಜೆಡಿಎಸ್ ಕೂಡ ಬಂದ್‌ಗೆ ಬೆಂಬಲ ಸೂಚಿಸಿದೆ. ‘ಕರ್ನಾಟಕ ಬಂದ್‌ಗೆ ಜೆಡಿಎಸ್ ಪಕ್ಷದಿಂದಲೂ ಸಂಪೂರ್ಣ ಬೆಂಬಲವಿದೆ’ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ರೈತ ಸಂಘಟನೆಗಳಿಗೆ, ಮಾಧ್ಯಮದವರಿಗೆ ತಿಳಿಸಿದ್ದಾರೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು