ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರ ಪಾದಯಾತ್ರೆ ಪ್ರಶ್ನಿಸಿ ತುರ್ತು ವಿಚಾರಣೆ ನಡೆಸುವಂತೆ ಹಿರಿಯ ವಕೀಲ ಶ್ರೀಧರ್ ಪ್ರಭು ಮನವಿಯನ್ನು ಪುರಸ್ಕರಿಸಿ ಹೈಕೋಟ್ ೯ ಪೀಠ
ರಾಜ್ಯ ಸರ್ಕಾರ ಹಾಗೂ ಕೆಪಿಸಿಸಿಗೆ ತೀವ್ರ ತರಾಟೆ ತೆಗೆದುಕೊಂಡು ಶುಕ್ರವಾರಕ್ಕೆ ವಿಚಾರಣೆಯನ್ನು ಮುಂದೂಡಿದೆ.
ಕೊರೊನಾ ಹೆಚ್ಚುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ಗೆ ಹೇಗೆ ಪಾದಯಾತ್ರೆ ಮಾಡಲು ಅನುಮತಿಯನ್ನ ನೀಡಿದ್ದೀರಿ. ಕೊರೊನಾ ನಿಯಮ ಪಾಲಿಸಲು ಮಾರ್ಗಸೂಚಿಯನ್ನು ನೀಡಿದ್ದೀರಾ ಎಂದು ಪ್ರಶ್ನಿಸಿದೆ.
ಅದಕ್ಕೆ ಉತ್ತರಿಸಿದ ಸರ್ಕಾರ, ಪಾದಯಾತ್ರೆ ಸಂಬಂಧ ಎಫ್ಐಆರ್ ಹಾಕಲಾಗಿದೆ. ಕೆಪಿಸಿಸಿಗೆ ನೋಟಿಸ್ ನೀಡಿದ್ದೇವೆ ಎಂದು ತಿಳಿಸಿತು.
ಈ ಉತ್ತರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಕೋರ್ಟ್, ವಾಸ್ತವವಾಗಿ ಆಗಿ ಏನು ಕ್ರಮ ತೆಗೆದುಕೊಂಡಿದ್ದೀರಿ? ಎಂದು ಪ್ರಶ್ನಿಸಿದೆ. ಮಾತ್ರವಲ್ಲ ಈ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಒಂದು ದಿನಗಳ ಕಾಲ ಡೆಡ್ಲೈನ್ ನೀಡಿದೆ.
ಕೊರೊನಾ ಸಂದರ್ಭದಲ್ಲಿ ಹೇಗೆ ನೀವು ಪಾದಯಾತ್ರೆ ಮಾಡುತ್ತಿದ್ದೀರಿ. ಕೊರೊನಾ ನಿಯಮ ಪಾಲಿಸಲು ನೀವು ತೆಗೆದುಕೊಂಡಿರುವ ಕ್ರಮಗಳೇನು? ಕೊರೊನಾ ಮಾರ್ಗಸೂಚಿಯನ್ನು ಪಾದಯಾತ್ರೆಯಲ್ಲಿ ಪಾಲನೆ ಮಾಡುತ್ತಿದ್ದೀರಾ ಎಂದು ಕೆಪಿಸಿಸಿಗೆ ಪ್ರಶ್ನೆ ಮಾಡಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು