December 23, 2024

Newsnap Kannada

The World at your finger tips!

Congress , list , election

ಸಿಎಂ ಬೊಮ್ಮಾಯಿ ತವರು ಜಿಲ್ಲೆಯೂ ಸೇರಿ 124 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ

Spread the love

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ. 10 ರಂದು ಮತದಾನ ನಡೆದಿದೆ ಇಂದು ಬೆಳಗ್ಗೆ 8 ಗಂಟೆಯಿಂದ ರಾಜ್ಯದ 34 ಕೇಂದ್ರಗಳಲ್ಲಿ ಮತ ಎಣಿಕೆ ಆರಂಭವಾಗಿದೆ, ಮಧ್ಯಾಹ್ನದ ವೇಳೆಗೆ 2615 ಮಂದಿ ಅಭ್ಯರ್ಥಿಗಳ ಭವಿಷ್ಯ ಬಹಿರಂಗವಾಗಿದೆ.

ಸಿಎಂ ಬಸವರಾಜ ಬೊಮ್ಮಾಯಿ ತವರು ಕ್ಷೇತ್ರ ಹಾವೇರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಸಾಧಿಸಿದೆ.
ಹಾವೇರಿ ಜಿಲ್ಲೆಯ 6 ಕ್ಷೇತ್ರಗಳ ಪೈಕಿ ಶಿಗ್ಗಾಂವಿ ಕ್ಷೇತ್ರ ಬಿಟ್ಟು ಉಳಿದ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ.

ವರುಣ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸಾಧಿಸಿದ್ದಾರೆ. ವಿ.ಸೋಮಣ್ಣ ಹಿನ್ನಡೆ ಸಾಧಿಸಿದ್ದಾರೆ.

ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿಎಂ ಬಸವರಾಜ ಬೊಮ್ಮಾಯಿ ಮುನ್ನಡೆ ಸಾಧಿಸಿದ್ದಾರೆ. ನಿಪ್ಪಾಣಿ ಬಿಜೆಪಿ ಶಶಿಕಲಾ ಜೊಲ್ಲೆ ಹಿನ್ನಡೆಯಾಗಿದೆ.

ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಗೆ ಹಿನ್ನಡೆಯಾಗಿದೆ.

ಬಿಜೆಪಿ ಅಭ್ಯರ್ಥಿ ಮಂಜುಳಾ ಲಿಂಬಾವಳಿಗೆ ಹಿನ್ನಡೆಯಾಗಿದೆ. ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಗೆ ಹಿನ್ನಡೆಯಾಗಿದೆ. ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲುಗೆ ಹಿನ್ನಡೆಯಾಗಿದೆ. ಶಿಕಾರಿಪುರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ವಿಜಯೇಂದ್ರಗೆ ಹಿನ್ನಡೆ

ಕಾಂಗ್ರೆಸ್ -124 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ

ಬಿಜೆಪಿ-70 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಜೆಡಿಎಸ್-23 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಪಕ್ಷೇತರರು- 7 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.ಕಾಂಗ್ರೆಸ್ ನಾಯಕರಿಂದ ನೂತನ ಶಾಸಕರನ್ನು ಸೇಫ್ ಮಾಡಲು 2 ಹೋಟೆಲ್ ಬುಕ್

ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆದಿತ್ತು 5,30,85,566 ಮತದಾರರ ಪೈಕಿ 3,88,51,807 ಜನರಿಂದ ಮತದಾನ. 26682156 ಪುರುಷರ ಪೈಕಿ 19658398 ಪುರುಷರು ಹಕ್ಕು ಚಲಾವಣೆ ಮಾಡಿದ್ದಾರೆ. 26398483 ಮಹಿಳಾ ಮತದಾರರ ಪೈಕಿ 19192372 ಮಹಿಳೆಯರಿಂದ ಮತದಾನವಾಗಿದ್ದು, 4927 ಮಂಗಳಮುಖಿಯರ ಪೈಕಿ 1037 ಮಂಗಳಮುಖಿಯರಿಂದ ಮತ ಚಲಾಯಿಸಿದ್ದಾರೆ. ರಾಜ್ಯದಲ್ಲಿ ಈ ಬಾರಿ ದಾಖಲೆ ಪ್ರಮಾಣದಲ್ಲಿ ಶೇ. 73.19ರಷ್ಟು ಮತಚಲಾವಣೆಯಾಗಿದೆ.

Copyright © All rights reserved Newsnap | Newsever by AF themes.
error: Content is protected !!