December 23, 2024

Newsnap Kannada

The World at your finger tips!

WhatsApp Image 2022 12 12 at 3.28.04 PM

Congress leader Pateriya, who had called for 'Kill Modi', was arrested 'ಮೋದಿ ಹತ್ಯೆ ಮಾಡಿ' ಕರೆ ನೀಡಿದ್ದ ಕಾಂಗ್ರೆಸ್ ನಾಯಕ ಪಟೇರಿಯಾ ಬಂಧನ

‘ಮೋದಿ ಹತ್ಯೆ ಮಾಡಿ’ ಕರೆ ನೀಡಿದ್ದ ಕಾಂಗ್ರೆಸ್ ನಾಯಕ ಪಟೇರಿಯಾ ಬಂಧನ

Spread the love

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಕೊಲ್ಲಲು ತಯಾರಾಗಿ ಎಂದು ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ರಾಜ ಪಟೇರಿಯಾ ಅವರನ್ನು ಪನ್ನಾ ಜಿಲ್ಲಾ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಸಂವಿಧಾನವನ್ನು ಉಳಿಸಬೇಕಾದರೆ ಪಿಎಂ ಮೋದಿಯನ್ನು ಕೊಲ್ಲಬೇಕು ಎಂದು ರಾಜಾ ಪಟೇರಿಯಾ ಅವರು ಜನರ ಗುಂಪನ್ನು ಪ್ರೇರೇಪಿಸುತ್ತಿರುವ ವೀಡಿಯೊ ವೈರಲ್ ಆಗಿತ್ತು. ಪಟೇರಿಯಾ ಅವರ ಹೇಳಿಕೆಯ ವಿಡಿಯೋ ವೈರಲ್ ಆದ ಬಳಿಕ ಮಧ್ಯಪ್ರದೇಶ ಸರ್ಕಾರವು ಮಾಜಿ ರಾಜ್ಯ ಸಚಿವ ಪಟೇರಿಯಾ ವಿರುದ್ಧ ಪೊಲೀಸ್ ತನಿಖೆಗೆ ಆದೇಶಿಸಿದೆ.ರಾಮನಗರ: ಎಚ್‌ಡಿಕೆ – ಸಿಪಿವೈ ನಡುವೆ ಅಭಿವೃದ್ಧಿ ಕ್ರೆಡಿಟ್ ವಾರ್: ಇಇ ಅಮಾನತು

ಮೋದಿ ವಿರುದ್ಧ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಪನ್ನಾ ಜಿಲ್ಲೆಯ ಪವಾಯಿ ಪೊಲೀಸ್ ಠಾಣೆಯಲ್ಲಿ ಪಟೇರಿಯಾ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಅಡಿಯಲ್ಲಿ ಸೋಮವಾರ ಮಧ್ಯಾಹ್ನ ಎಫ್ಐಆರ್ ದಾಖಲಾಗಿತ್ತು.

Copyright © All rights reserved Newsnap | Newsever by AF themes.
error: Content is protected !!